ಕೃಷಿ ವಿವಿಗಳು ಗ್ರಾಮಗಳನ್ನು ದತ್ತು ಪಡೆಯಬೇಕು: ಬಿ.ಸಿ. ಪಾಟೀಲ್
ರಾಜ್ಯದ ಕೃಷಿವಿಶ್ವಿದ್ಯಾಲಯಗಳು ಗ್ರಾಮಗಳನ್ನು ದತ್ತು ಪಡೆಯಬೇಕು. ಈ ಮೂಲಕ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ನಾಂದಿಹಾಡಬೇಕು. ಇದು ಅತ್ಯಂತ ಜರೂರಿನ ಕೆಲಸ ಎಂದು ಕೃಷಿ ಸಚಿವರೂ ಆಗಿರುವ ಕೃಷಿವಿಶ್ವದ್ಯಾಲಯಗಳ ಸಹ ಕುಲಾಧಿಪತಿ ಬಿ.ಸಿ. ಪಾಟೀಲ್ ಅವರು ಶನಿವಾರ ಕರೆ ನೀಡಿದ್ದಾರೆ.

ಬೆಂಗಳೂರು: ರಾಜ್ಯದ ಕೃಷಿವಿಶ್ವಿದ್ಯಾಲಯಗಳು ಗ್ರಾಮಗಳನ್ನು ದತ್ತು ಪಡೆಯಬೇಕು. ಈ ಮೂಲಕ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ನಾಂದಿಹಾಡಬೇಕು. ಇದು ಅತ್ಯಂತ ಜರೂರಿನ ಕೆಲಸ ಎಂದು ಕೃಷಿ ಸಚಿವರೂ ಆಗಿರುವ ಕೃಷಿವಿಶ್ವದ್ಯಾಲಯಗಳ ಸಹ ಕುಲಾಧಿಪತಿ ಬಿ.ಸಿ. ಪಾಟೀಲ್ ಅವರು ಶನಿವಾರ ಕರೆ ನೀಡಿದ್ದಾರೆ.
ಕೃಷಿ ವಿಶ್ವವಿದ್ಯಾಲಯದ 54ನೇ ಘಟಿಕೋತ್ವವದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪಿ.ಎಚ್.ಡಿ. ಪಡೆದವರಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಒಟ್ಟು ಆರು ಕೃಷಿ ವಿಶ್ವವಿದ್ಯಾಲಯಗಳಿವೆ. ಇವುಗಳು ಪ್ರತಿವರ್ಷ ತಲಾ ನಾಲ್ಕು ಹಳ್ಳಿಗಳನ್ನು ದತ್ತು ಪಡೆದುಕೊಂಡು ಅಲ್ಲಿನ ಕೃಷಿಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಮಾದರಿ ಗ್ರಾಮಗಳನ್ನಾಗಿ ಮಾಡಬೇಕು ಎಂದು ಸಲಹೆ ಮಾಡಿದರು.
ಕಳೆದ ಇಪ್ಪತ್ತು ವರ್ಷಗಳಿಂದ ರಾಜ್ಯದ ಕೃಷಿ ಇಲಾಖೆಯ ವೃಂದ – ನೇಮಕಾತಿ ನಿಯಮಾವಳಿಗಳಿಗೆ ತಿದ್ದುಪಡಿಯಾಗಿರಲಿಲ್ಲ. ನಾನು ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದರ ಬಗ್ಗೆ ಆಸಕ್ತಿ ವಹಿಸಿದೆ. ಅದು ಇತ್ತೀಚೆಗೆ ತಿದ್ದುಪಡಿಯಾಗಿದೆ ಎಂದರು.
ಇನ್ನು ಆಹಾರ ಮತ್ತು ಕೃಷಿ ಇಂಜಿನಿಯರಿಂಗ್ ವಿಷಯಗಳಲ್ಲಿ ಪದವಿ ಪಡೆದವರಿಗೆ ಶೇಕಡ 15ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿದೆ ಎಂದು ಬಿಸಿ ಪಾಟೀಲ್ ಅವರು ವಿವರಿಸಿದರು.
ಪದವಿ, ಅತೀಹೆಚ್ಚು ಚಿನ್ನದ ಪದಕಗಳನ್ನು ಪಡೆದವರಲ್ಲಿ ವಿದ್ಯಾರ್ಥಿನಿಯರೇ ಅಧಿಕವಾಗಿದ್ದಾರೆ. ಇದು ಸಂತೋಷದ ಸಂಗತಿ. ಆದರೆ ಉದ್ಯಮಿಗಳಾದವರು, ಸರ್ಕಾರಿ ಉದ್ಯೋಗಿಗಳಾದವರ ಸಂಖ್ಯೆ ಗಮನಿಸಿದರೆ ಮಹಿಳೆಯರು ಕಡಿಮೆ ಇದ್ದಾರೆ. ಕೃಷಿ ಪದವಿ, ಸ್ನಾತಕೋತ್ತರ ಪದವಿ ಪಡೆದವರು ಕೃಷಿ ನವೋದ್ಯಮಿಗಳಾಗಿ ಹೊರಹೊಮ್ಮಬೇಕು. ಈ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಈ ಮಾದರಿಯಲ್ಲಿ ಇಂಥ ವಿದ್ಯಾರ್ಥಿನಿಯರ ಜೀವನಪಥ ಮುಂದುವರಿಯಲು ಕೃಷಿ ವಿಶ್ವವಿದ್ಯಾಲಯ ಆಸಕ್ತಿ ವಹಿಸಬೇಕು ಎಂದು ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


