ರಾಜ್ಯ

ಆತ್ಮಹತ್ಯೆಗೆ ಯತ್ನಿಸಿದ್ದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ವಿರುದ್ಧ ಎಫ್ಐಆರ್ ದಾಖಲು

ಸಂತೋಷ್ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 309ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ್ದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ವಿರುದ್ಧ ಎಫ್ಐಆರ್ ದಾಖಲು
ಸಂತೋಷ್ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಸಂತೋಷ್ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 309ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

ಸಂತೋಷ್ ಅವರು ಶುಕ್ರವಾರ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಕುಟುಂಬಸ್ಥರು ಅವರನ್ನು ನಗರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ತುರ್ತುನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಂಎಸ್ ರಾಮಯ್ಯ ಆಸ್ಪತ್ರೆಯಿಂದ ಎಂಎಲ್ ಸಿ ರಿಪೋರ್ಟ್ ರವಾನೆ ಆಗಿದ್ದು, ಈ ವರದಿ ಸದಾಶಿವನಗರ ಪೊಲೀಸರ ಕೈಗೆ ಸಿಕ್ಕಿದೆ.

ವರದಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಮಾತಾನಾಡಲು ಶಕ್ತನಲ್ಲ. ಐಸಿಯುನಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉಲ್ಲೇಖಿಸಲಾಗಿದೆ.

ಆಸ್ಪತ್ರೆಯ ಎಂಎಲ್ ಸಿ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲು ಖಾಕಿ ಚಿಂತನೆ ನಡೆಸುತ್ತಿದ್ದು, ಸಂತೋಷ್ ಚೇರಿಸಿಕೊಂಡ ಬಳಿಕ ವಿಚಾರಣೆಗೆ ಒಳಪಡಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.