ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ
ಮಾರಕಾಸ್ತ್ರಗಳಿಂದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಂದ್ರಾ ಲೇಔಟ್ ನ ಗಂಗೋಡನಹಳ್ಳಿಯಲ್ಲಿ ಕಳೆದ ರಾತ್ರಿ ನಡೆದಿದೆ.

ಬೆಂಗಳೂರು: ಮಾರಕಾಸ್ತ್ರಗಳಿಂದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಂದ್ರಾ ಲೇಔಟ್ ನ ಗಂಗೋಡನಹಳ್ಳಿಯಲ್ಲಿ ಕಳೆದ ರಾತ್ರಿ ನಡೆದಿದೆ.
ಗಂಗೋಡನಹಳ್ಳಿಯ ಸಾಹಿಲ್ ಕೊಲೆಯಾದವರು. ಸಾಹೀಲ್ ಮನೆಯ ಸಮೀಪದ ಮಾರಮ್ಮನ ದೇವಸ್ಥಾನ ಬಳಿ ರಾತ್ರಿ 12 ಗಂಟೆಯ ವೇಳೆ ಮೂವರು ಯುವಕರ ನಡುವೆ ಕ್ಲುಲಕ ಕಾರಣಕ್ಕೆ ಜಗಳ ಉಂಟಾಗಿದೆ. ಗಲಾಟೆಯು ವಿಕೋಪಕ್ಕೆ ತಿರುಗಿದಾಗ, ಎದುರಾಳಿಗಳು ಸಾಹಿಲ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಗಂಭೀರವಾಗಿ ಗಾಯಗೊಂಡ ಸಾಹಿಲ್ ನನ್ನು ಕಿಮ್ಸ್ ಅಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಾಲೇಔಟ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


