ಬೆಂಗಳೂರಿನ ಯುವಕ ಮುರುಡೇಶ್ವರದಲ್ಲಿ ಸಮುದ್ರ ಪಾಲು
ಮುರುಡೇಶ್ವರದ ಸಮುದ್ರದಲ್ಲಿ ಬೆಂಗಳೂರಿನ ಯುವಕನೋರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಭಟ್ಕಳ: ಮುರುಡೇಶ್ವರದ ಸಮುದ್ರದಲ್ಲಿ ಬೆಂಗಳೂರಿನ ಯುವಕನೋರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಮುರುಡೇಶ್ವರ ಸಮುದ್ರದಲ್ಲಿ ಈಜ್ಲು ಹೋದ ಬೆಂಗಳೂರು ಮೂಲದ ಯುವಕನೊಬ್ಬ ಅಲೆಗಳ ರಭಸಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಬಾಣಸಂದ್ರ ನಿವಾಸಿ ಮಂಜುನಾಥ್ ವೆಂಕಟೇಶ್ ಮಡಿವಾಳ (20 ವರ್ಷ) ಮೃತಪಟ್ಟವರು.
ಮೃತ ಮಂಜುನಾಥ್ ವೆಂಕಟೇಶ್ ತನ್ನ ಏಳು ಜನ ಸ್ನೇಹಿತರೊಂದಿಗೆ ಈಜುತ್ತಿರುವಾಗ ಈ ದುರ್ಘಟನೆ ನಡೆದಿದೆ. ಈಜಲು ಸಮುದ್ರಕ್ಕೆ ಇಳಿದಿದ್ದ ಏಳು ಮಂದಿ ಪೈಕಿ ಮಂಜುನಾಥ್ ಅವರನ್ನು ಹೊರತು ಪಡಿಸಿ ಉಳಿದವರು ನೀರಿನಿಂದ ಮೇಲೆ ಬಂದಿದ್ದರು. ಆದರೆ ಮಂಜುನಾಥ್ ಅಲೆಗಳ ರಭಸಕ್ಕೆ ಸಿಲುಕಿದ್ದು, ದಡದಲ್ಲಿದ್ದ ಮೀನುಗಾರರು ಗಮನಿಸಿ ಅವರ ರಕ್ಷಣೆ ಮಾಡಿ ಸಮುದ್ರದಿಂದ ಮೇಲೆ ತಂದಿದ್ದಾರೆ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟ್ಟು ಹೊತ್ತಿಗಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿತ್ತು.
ಮಂಜುನಾಥ್ ಬೆಂಗಳೂರಿನಲ್ಲಿ ವೈದ್ಯಕೀಯ ಸೇವೆಯಲ್ಲಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿರುವ ಅವರ ಕುಟುಂಬ ಸದಸ್ಯರಿಗೆ ಘಟನೆ ಕುರಿತಂತೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


