ರಾಜ್ಯ

ಮೈಸೂರು ಮೃಗಾಲಯಕ್ಕೆ 20 ಲಕ್ಷ ರೂ. ದೇಣಿಗೆ ನೀಡಿದ ಸುಧಾ ಮೂರ್ತಿ

ಸಾಂಸ್ಕೃತಿಕ ನಗರಿ ಮೈಸೂರು ಮೃಗಾಲಯದಲ್ಲಿ ಪ್ರಾಣಿಗಳ ಪಾಲನೆಗಾಗಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು 20 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಮೈಸೂರು ಮೃಗಾಲಯಕ್ಕೆ 20 ಲಕ್ಷ ರೂ. ದೇಣಿಗೆ ನೀಡಿದ ಸುಧಾ ಮೂರ್ತಿ
ಸುಧಾಮೂರ್ತಿ
Published On :

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಮೃಗಾಲಯದಲ್ಲಿ ಪ್ರಾಣಿಗಳ ಪಾಲನೆಗಾಗಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು 20 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಗುರುವಾರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರಣಿ ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ್ದು, ಸುಧಾ ಮೂರ್ತಿ ಅವರು ಕಳೆದ ಮೇ ತಿಂಗಳಲ್ಲಿ 20 ಲಕ್ಷ ರೂ. ನೀಡಿರುವುದಾಗಿ ಹೇಳಿದ್ದಾರೆ.

ಕೋವಿಡ್ -19 ರ ಕಷ್ಟದ ಸಮಯದಲ್ಲಿ ಸುಧಾ ಮೂರ್ತಿಯವರ ಈ ರೀತಿಯ ಉದಾರವಾದ ದೇಣಿಗೆ ಅತ್ಯಮೂಲ್ಯ ಮತ್ತು ಇತರರಿಗೆ ಸ್ಫೂರ್ತಿಯಾಗಿದೆ.

ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದ ನಿರ್ವಹಣೆಯ ಮುಖ್ಯ ಆದಾಯ ಪ್ರವಾಸಿಗರ ಪ್ರವೇಶ ಶುಲ್ಕವಾಗಿತ್ತು. ಆದರೆ, ಕೋವಿಡ್‌ ಲಾಕ್‌ಡೌನ್‌ನಿಂದಾಗಿ ಪ್ರವಾಸಿಗರಿಲ್ಲದೆ ಮೃಗಾಲಯದ ನಿರ್ವಹಣೆ ಭವಿಷ್ಯದಲ್ಲಿಕ ಷ್ಟಕರವಾಗಲಿದೆ. ಈ ಹಿನ್ನೆಲೆಯಲ್ಲಿ ನೆರವಿನ ಹಸ್ತ ನೀಡುವಂತೆ ಇನ್ಫೋಸಿಸ್‌ ಫೌಂಡೇಷನ್‌ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರಿಗೆ ಜಿಲ್ಲಾಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ ಡಾ.ಸುಧಾ ಮೂರ್ತಿ ಅವರು ಮೃಗಾಲಯಕ್ಕೆ 20 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.