ಬೆಂಗಳೂರು: ಮರಕ್ಕೆ ಕಾರು ಡಿಕ್ಕಿ, ವ್ಯಕ್ತಿ ಸಾವು
ಕಾರೊಂದು ರಸ್ತೆಯ ಪಕ್ಕದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಗರದ ಮಲ್ಲೇಶ್ವರಂ ಮುಖ್ಯರಸ್ತೆಯಲ್ಲಿ ನಡೆದಿದೆ.

ಬೆಂಗಳೂರು: ಕಾರೊಂದು ರಸ್ತೆಯ ಪಕ್ಕದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಗರದ ಮಲ್ಲೇಶ್ವರಂ ಮುಖ್ಯರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ವಿಜಯನಗರ ನಿವಾಸಿ ರಜತ್ (27) ಮೃತಪಟ್ಟ ಯುವಕ. ಮಧ್ಯರಾತ್ರಿ 1.30ರ ಸುಮಾರಿಗೆ ಕಾರಿನಲ್ಲಿ ಮಲ್ಲೇಶ್ವರಂ ರಸ್ತೆ ಮಾರ್ಗವಾಗಿ ರಜತ್ ತೆರಳುತ್ತಿದ್ದ. ಆದರೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಆಗ ಗಂಭೀರವಾಗಿ ಗಾಯಗೊಂಡಿದ್ದ ರಜತ್ನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವಾಗ, ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಮೃತದೇಹವನ್ನು ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಸ್ಥಳಕ್ಕೆ ಮಲ್ಲೇಶ್ವರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅತಿವೇಗವೇ ಈ ಘಟನೆ ಕಾರಣವಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


