ಅಪಘಾತದಲ್ಲಿ ಪವರ್ ಟಿವಿ ಕ್ಯಾಮೆರಾಮನ್ ಸಾವು!
ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವರ್ ಟಿವಿ ಕ್ಯಾಮೆರಾಮನ್ ಸುನಿಲ್ ಪಾಚಂ(29 ವರ್ಷ) ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಹುಬ್ಬಳ್ಳಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವರ್ ಟಿವಿ ಕ್ಯಾಮೆರಾಮನ್ ಸುನಿಲ್ ಪಾಚಂ(29 ವರ್ಷ) ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಮೂರು ದಿನಗಳ ಹಿಂದೆ ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಚಾಟ್ನಿ ಕಾಂಪ್ಲೆಕ್ಸ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಸುನಿಲ್ ಪಾಚಂ ಗಂಭೀರ ಗಾಯಗೊಂಡಿದ್ದರು. ಗುರುವಾರ ರಾತ್ರಿ ಸುನೀಲ ಅವರು ಕರ್ತವ್ಯ ಮುಗಿಸಿ ಮನೆಗೆ ತೆರಳುವಾಗ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕಿಮ್ಸ್'ಗೆ ದಾಖಲಿಸಲಾಗಿತ್ತು.
ಸುನಿಲ್ ಅವರ ತಲೆ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿತ್ತು. ವೈದ್ಯರು ಸಾಕಷ್ಟು ಪ್ರಯತ್ನಿಸಿದರೂ ಚಿಕಿತ್ಸೆಗೆ ಸ್ಪಂದಿಸದ ಕಾರಣ ಅವರು ಮೃತಪಟ್ಟಿದ್ದಾರೆ ಎಂದು ಕಿಮ್ಸ್ ವೈದ್ಯರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


