ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಮುಕ್ತಾಯ: 57 ಲಕ್ಷ ರೂ. ನಗದು, ಮಹತ್ವದ ದಾಖಲೆ ಪತ್ತೆ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸೋಮವಾರ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದ್ದ ಸಿಬಿಐ, 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಸಿದ ಆರೋಪದ ಮೇಲೆ ಡಿಕೆಶಿ ಹಾಗೂ ಅವರ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸೋಮವಾರ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದ್ದ ಸಿಬಿಐ, 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಸಿದ ಆರೋಪದ ಮೇಲೆ ಡಿಕೆಶಿ ಹಾಗೂ ಅವರ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸಿದೆ.
ಡಿಕೆ ಶಿವಕುಮಾರ್ ಹಾಗೂ ಅವರ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಿ, 14 ಸ್ಥಳಗಳಲ್ಲಿ ಹುಡಕಾಟ ನಡೆಸಲಾಗಿದೆ. ಪರಿಶೀಲನೆ ವೇಳೆ 57 ಲಕ್ಷ ರೂ ನಗದು ಹಾಗೂ ಆಸ್ತಿ ದಾಖಲೆಗಳು, ಬ್ಯಾಂಕ್ ಗೆ ಸಂಬಂಧಿಸಿದ ಮಾಹಿತಿಗಳು, ಕಂಪ್ಯೂಟರ್ ಹಾರ್ಡ್ ಡಿಸ್ಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
74.93 ಕೋಟಿ ರೂ ಅಸಮರ್ಪಕ ಆಸ್ತಿಗಳನ್ನು ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರ ಹೆಸರಿನಲ್ಲಿ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮಾರ್ಚ 2020 ರಲ್ಲಿ ಕರ್ನಾಟಕ ಸರ್ಕಾರವು ದೆಹಲಿ ವಿಶೇಷ ಪೊಲೀಸ್ ಎಸ್ಟಾಬ್ಲಿಷ್ ಮೆಂಟ್ ಕಾಯ್ದೆಯ 6 ರ ಅಡಿಯಲ್ಲಿ ಅಧಿಸೂಚನೆಯನ್ನು ಹೊರಡಿಸಿದೆ. ಅದರ ಭಾಗವಾಗಿ ಕೇಂದ್ರ ಸರ್ಕಾರ ಡಿಎಸ್ ಪಿಇ ಕಾಯ್ದೆಯ ಅಧಿಸೂಚನೆ 5ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ ಎಂದು ಸಿಬಿಐ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


