ರಾಜ್ಯ

ಚಾಮರಾಜನಗರ: ಜಮೀನಿನಲ್ಲಿ ವಿದ್ಯುತ್​ ತಗುಲಿ ಕಾಡಾನೆ ಬಲಿ

ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕುರುಬರ ಹುಂಡಿಯಲ್ಲಿ ಟೊಮ್ಯಾಟೊ ಬೆಳೆ‌ ರಕ್ಷಣೆಗೆ ಹಾಯಿಸಿದ್ದ ಅಕ್ರಮ ವಿದ್ಯುತ್​​ಗೆ ಗಂಡಾನೆ ಬಲಿಯಾಗಿದೆ.

ಚಾಮರಾಜನಗರ: ಜಮೀನಿನಲ್ಲಿ ವಿದ್ಯುತ್​ ತಗುಲಿ ಕಾಡಾನೆ ಬಲಿ
ವಿದ್ಯುತ್ ತಗುಲಿ ಮೃತಪಟ್ಟಿರುವ ಕಾಡಾನೆ
Published On :

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕುರುಬರ ಹುಂಡಿಯಲ್ಲಿ ಟೊಮ್ಯಾಟೊ ಬೆಳೆ‌ ರಕ್ಷಣೆಗೆ ಹಾಯಿಸಿದ್ದ ಅಕ್ರಮ ವಿದ್ಯುತ್​​ಗೆ ಗಂಡಾನೆ ಬಲಿಯಾಗಿದೆ.

ಗ್ರಾಮದ ದಾಸನಾಯ್ಕ ಎಂಬುವರ ಜಮೀನಿನಲ್ಲಿ ಅಂದಾಜು 16 ವರ್ಷದ ಗಂಡಾನೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದು, ಜಮೀನು ಮಾಲೀಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸತತ ಮಳೆಗೆ ಆನೆ ಕಂದಕ ಮುಚ್ಚಿಹೋಗಿರುವುದರಿಂದ ಆನೆಗಳು ದಾಂಗುಡಿ ಇಟ್ಟಿವೆ ಎನ್ನಲಾಗಿದೆ. 

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವಲಯದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬೇಗೂರು ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು, ಸೆಸ್ಕ್ ಸಿಬ್ಬಂದಿ ಭೇಟಿ‌ ನೀಡಿ ಪರಿಶೀಲಿಸಿದ್ದಾರೆ.


ವರದಿ: ಗುಳಿಪುರ ನಂದೀಶ ಎಂ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.