ಗುಂಡಿನ ದಾಳಿ: ಬಿಜೆಪಿ ಮುಖಂಡ ಕಳಗಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಾವು
ಬಿಜೆಪಿ ನಾಯಕ ಬಾಲಚಂದ್ರ ಕಳಗಿ ಅವರ ಕೊಲೆ ಪ್ರಕರಣದ ಮುಖ್ಯ ಆರೋಪಿಯು ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಹತನಾಗಿದ್ದಾನೆ.

ಮಂಗಳೂರು: ಬಿಜೆಪಿ ನಾಯಕ ಬಾಲಚಂದ್ರ ಕಳಗಿ ಅವರ ಕೊಲೆ ಪ್ರಕರಣದ ಮುಖ್ಯ ಆರೋಪಿಯು ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಹತನಾಗಿದ್ದಾನೆ.
ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆರೋಪಿ ಸಂಪತ್ ಮೃತಪಟ್ಟಿರುವುದಾಗಿ ಸುಲಿಯಾ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಘೋಷಿಸಿದ್ದಾರೆ.
ಬೆಳಿಗ್ಗೆ ಶಾಂತಿನಗರದಲ್ಲಿರುವ ತನ್ನ ಮನೆಯಿಂದ ಹೊರಬಂದಾಗ ಸಂಪತ್ ಮೇಲೆ ಗುಂಡಿನ ದಾಳಿಯಾಗಿದೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಬಿ ಎಂ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ.ಗುಂಡು ಹಾರಿಸಿದ ಬಳಿಕ ಹಲ್ಲೆಕೋರರು ವಾಹನದಲ್ಲಿ ವೇಗವಾಗಿ ಪರಾರಿಯಾಗಿದ್ದಾರೆ.
ಗುಂಡಿನ ದಾಳಿಯ ಜತೆಗೆ ಮಚ್ಚು ಮೊದಲಾದ ಆಯುಧಗಳಿಂದಲೂ ಸಂಪತ್ ತಲೆಬುರುಡೆಯ ಮೇಲೆ ಬಲವಾಗಿ ಹೊಡೆಯಲಾಗಿದೆ. ಹಲ್ಲೆಕೋರರು ಆತನಿಗೆ ಪರಿಚಿತರೇ ಆಗಿರಬಹುದು ಎಂಬುದು ನಮ್ಮ ಆರಂಭಿಕ ತನಿಖೆಯ ಆಧಾರದ ಮೇಲೆ ತಿಳಿದುಬಂದಿರುವುದಾಗಿ ಅಧಿಕಾರಿ ಹೇಳಿದ್ದಾರೆ.
ಒಂದು ವರ್ಷದ ಹಿಂದೆ ಬಿಜೆಪಿ ನಾಯಕ ಬಾಲಚಂದ್ರ ಕಳಗಿಯನ್ನು ಕೊಲೆ ಮಾಡಿದ್ದ ಆರೋಪ ಸಂಪತ್ ಮೇಲಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


