ಮೈಸೂರು ದಸರಾ ಸಿದ್ಧತೆ ಕುರಿತ ವರದಿ ನೀಡಿ: ಅಧಿಕಾರಿಗಳಿಗೆ ಸಚಿವ ಶ್ರೀರಾಮುಲು
ಕೋವಿಡ್-19 ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ದಸರಾ ಆಚರಿಸುವ ಸಂಬಂಧ ತಜ್ಞರ ತಂಡವನ್ನು ಮೈಸೂರಿಗೆ ಕಳುಹಿಸಲಾಗುತ್ತಿದೆ. ಇವರು ವರದಿ ನೀಡಿದ 24 ಗಂಟೆಯೊಳಗೆ ಕ್ರಿಯಾ ಯೋಜನೆ ತಯಾರಿಸುವಂತೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೈಸೂರು: ಕೋವಿಡ್-19 ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ದಸರಾ ಆಚರಿಸುವ ಸಂಬಂಧ ತಜ್ಞರ ತಂಡವನ್ನು ಮೈಸೂರಿಗೆ ಕಳುಹಿಸಲಾಗುತ್ತಿದೆ. ಇವರು ವರದಿ ನೀಡಿದ 24 ಗಂಟೆಯೊಳಗೆ ಕ್ರಿಯಾ ಯೋಜನೆ ತಯಾರಿಸುವಂತೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಾಡಹಬ್ಬ ದಸರಾ ಉತ್ಸವ ಆಚರಿಸುವ ಹಿನ್ನೆಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳ ಕುರಿತು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ವಿಶ್ವವಿಖ್ಯಾತ ನಾಡಹಬ್ಬ ದಸರಾ ಉತ್ಸವವನ್ನು ನಡೆಸುವ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದ್ದಾರೆ. ಈ ಸೂಚನೆಯಂತೆ ದಸರಾ ಆಚರಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಮೈಸೂರು ಹಾಗೂ ಬೆಂಗಳೂರಿನಲ್ಲಿ ಅತೀ ಹೆಚ್ಚು ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಮನಗಂಡು ಸರಳ ಹಾಗೂ ಸಾಂಪ್ರದಾಯಿಕವಾಗಿ ದಸರಾ ಮಹೋತ್ಸವವನ್ನು ಸರಲವಾಗಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ಸರ್ಕಾರದ ಮೇಲೆ ಜವಾಬ್ದಾರಿ ಹಾಕಿ ಸುಮ್ಮನಿರಬಾರದು. ಸರ್ಕಾರಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದಿದ್ದಾರೆ.
ಸಾರ್ವಜನಿಕರು ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಸುರಕ್ಷತೆಯಿಂದ ಸರಳ ದಸರಾ ಮಹೋತ್ಸವವನ್ನು ಮಾಡಲು ಅವಕಾಶ ಮಾಡಿಕೊಡಬೇಕೆಂದು ಇದೇ ವೇಳೆ ಮನವಿ ಮಾಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


