25 ವರ್ಷಗಳ ದಾಂಪತ್ಯದಲ್ಲಿ ಕೋವಿಡ್ ಕಾರಣದಿಂದ ಇದೇ ಮೊದಲ ಬಾರಿಗೆ ಪ್ರತ್ಯೇಕವಾಗಿದ್ದೇವೆ: ಟಬು ರಾವ್
ಕೋವಿಡ್ ಹಿನ್ನೆಲೆ 25 ವರ್ಷಗಳ ವೈವಾಹಿಕ ಬದುಕಿನಲ್ಲಿ ಇದೇ ಮೊದಲ ಬಾರಿಗೆ ಒಟ್ಟಾಗಿ ದಿನೇಶ್ ಗುಂಡೂರಾವ್ ಹುಟ್ಟುಹಬ್ಬ ಆಚರಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರ ಪತ್ನಿ ತಬು ರಾವ್ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕೋವಿಡ್ ಹಿನ್ನೆಲೆ 25 ವರ್ಷಗಳ ವೈವಾಹಿಕ ಬದುಕಿನಲ್ಲಿ ಇದೇ ಮೊದಲ ಬಾರಿಗೆ ಒಟ್ಟಾಗಿ ದಿನೇಶ್ ಗುಂಡೂರಾವ್ ಹುಟ್ಟುಹಬ್ಬ ಆಚರಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರ ಪತ್ನಿ ತಬು ರಾವ್ ಬೇಸರ ವ್ಯಕ್ತಪಡಿಸಿದ್ದಾರೆ.
ಕೋವಿಡ್-19 ಸೋಂಕಿತರ ಆಗಿರುವ ದಿನೇಶ್ ಗುಂಡೂರಾವ್, ಕುಟುಂಬ ಸದಸ್ಯರಿಂದ ಪ್ರತ್ಯೇಕವಾಗಿ ಇದ್ದು, ಅ.9 ರಂದು ದಿನೇಶ್ 51ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಕಳೆದ 25 ವರ್ಷದಿಂದ ಕುಟುಂಬ ಸದಸ್ಯರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡು ಸಂಭ್ರಮಿಸಿದ್ದ ದಿನೇಶ್ ಗುಂಡೂರಾವ್ ಗೆ ಈ ಸಾರಿ ಅವಕಾಶ ಇಲ್ಲ. ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಅವರು ಪ್ರತ್ಯೇಕ ಕ್ವಾರಂಟೈನ್ ಆಗಿದ್ದು, ಇದೇ ಮೊದಲ ಬಾರಿಗೆ ಅವರ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ಆಗುತ್ತಿಲ್ಲ ಎಂದು ಟ್ವೀಟ್ ಮೂಲಕ ತಬು ರಾವ್ ತಿಳಿಸಿದ್ದಾರೆ.
ನಾವು ಸದ್ಯ ಪ್ರತ್ಯೇಕವಾಗಿ ಇದ್ದರೂ, ನಮ್ಮಿಬ್ಬರ ಆಲೋಚನೆ ಒಂದೇ ಆಗಿದೆ. ಉತ್ತಮ ಆರೋಗ್ಯ ಮತ್ತು ಶಾಂತಿ ನಿಮ್ಮದಾಗಲಿ ಎಂದು ಆಶಿಸುತ್ತಾ ಜನ್ಮದಿನದ ಶುಭಾಶಯಗಳು ಮತ್ತು ನಿಮ್ಮ ಎಲ್ಲಾ ಕನಸುಗಳು ನನಸಾಗಲಿ ಎಂದು ಹಾರೈಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


