ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಐಎಲ್ಎಸ್, ವರ್ಷಾಂತ್ಯಕ್ಕೆ ಲ್ಯಾಂಡಿಂಗ್ ಹೆಚ್ಚು ಸರಾಗ ಮತ್ತು ಸುರಕ್ಷಿತ
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಸ್ಥಾಪಿಸಲಾದ ಇನ್ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್(ಐಎಲ್ಎಸ್) ಈ ವರ್ಷದ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲಿದ್ದು, ಇನ್ನು ಮುಂದೆ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲೂ ಸುಲಭವಾಗಿ ಮತ್ತು ಸುರಕ್ಷಿತವಾಗಿ ವಿಮಾನವನ್ನು ಲ್ಯಾಂಡ್ ಮಾಡಬಹುದು.

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಸ್ಥಾಪಿಸಲಾದ ಇನ್ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್(ಐಎಲ್ಎಸ್) ಈ ವರ್ಷದ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲಿದ್ದು, ಇನ್ನು ಮುಂದೆ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲೂ ಸುಲಭವಾಗಿ ಮತ್ತು ಸುರಕ್ಷಿತವಾಗಿ ವಿಮಾನವನ್ನು ಲ್ಯಾಂಡ್ ಮಾಡಬಹುದು.
ಕಳೆದ ಜನವರಿಯಲ್ಲಿ ಐಎಲ್ಎಸ್ ಉಪಕರಣ ಸ್ಥಾಪಿಸಲಾಗಿದ್ದು, ಲಾಕ್‌ಡೌನ್ ಕಾರಣ ಇತರ ತಾಂತ್ರಿಕ ಪ್ರಕ್ರಿಯೆಗಳು ವಿಳಂಬವಾದವು. ಈಗ ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಕಳೆದು ತಿಂಗಳು ಪ್ರಾಯೋಗಿಕ ಪರೀಕ್ಷೆ ಸಹ ನಡೆಸಲಾಗಿದೆ.
ಐಎಲ್ಎಸ್ ಸ್ಥಾಪನೆಯು ವಿಮಾನ ನಿಲ್ದಾಣ ನವೀಕರಣ ಯೋಜನೆಯ ಭಾಗವಾಗಿದ್ದು, ಅದು ಈಗ ಪೂರ್ಣಗೊಂಡಿದೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್ ಕುಮಾರ್ ಠಾಕ್ರೆ ತಿಳಿಸಿದ್ದಾರೆ.
ಈ ಹೊಸ ತಂತ್ರಜ್ಞಾನದಿಂದ ವಿಮಾನ ನಿಲ್ದಾಣದ ಸಿಬ್ಬಂದಿಯ ಅನುಮತಿಗೆ ಕಾಯುವುದು ಬೇಕಿಲ್ಲ. ಐಎಲ್‍ಎಸ್ ನೆಲಮಟ್ಟದಿಂದ ಕಾರ್ಯನಿರ್ವಹಿಸುವ ರೇಡಾರ್ ಆಧಾರಿತ ತಂತ್ರಜ್ಞಾನವಾಗಿದ್ದು, ಪ್ರತಿಕೂಲ ಪರಿಸ್ಥಿತಿಯಲ್ಲಿ ಲ್ಯಾಂಡ್ ಆಗಲು ತರಂಗದ ಮೂಲಕ ಪೈಲಟ್‌ಗೆ ಸಂದೇಶ ರವಾನಿಸುತ್ತದೆ. ರನ್ ವೇ ಪಕ್ಕದಲ್ಲಿ ಐಎಲ್‌ಎಸ್ ಸ್ಥಾಪಿಸಲಾಗಿದ್ದು, ಲಘುವಾದ ಆ್ಯಂಟಿನಾಗಳು ಇರುವ ಕಾರಣ ವಿಮಾನಗಳು ತಾಕಿದರೆ ನೆಲಕ್ಕೆ ಬೀಳುತ್ತವೆ. ಇದರಿಂದ ವಿಮಾನಗಳಿಗೆ ಏನೂ ಹಾನಿಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


