ರಾಜ್ಯ

ವಿದ್ಯಾಗಮದಲ್ಲಿ ಅಸ್ಪೃಶ್ಯತೆ ಆರೋಪ: ಶಿಕ್ಷಕಿ ಅಮಾನತು, ಮುಖ್ಯ ಶಿಕ್ಷಕ ವರ್ಗಾವಣೆ

ವಿದ್ಯಾಗಮ‌ ಕಲಿಕೆ ವೇಳೆ ಕೆಲ ವಿದ್ಯಾರ್ಥಿಗಳನ್ನು ಕೊಠಡಿಯಿಂದ ಹೊರಗಿಟ್ಟ ಆರೋಪದ ಮೇಲೆ ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಪ್ರಾಥಮಿಕ ಶಾಲೆಯ ಶಿಕ್ಷಕಿ ನಾಗಮಣಿ ಎಂಬುವರನ್ನು ಅಮಾನತುಗೊಳಿಸಲಾಗಿದೆ.

ವಿದ್ಯಾಗಮದಲ್ಲಿ ಅಸ್ಪೃಶ್ಯತೆ ಆರೋಪ: ಶಿಕ್ಷಕಿ ಅಮಾನತು, ಮುಖ್ಯ ಶಿಕ್ಷಕ ವರ್ಗಾವಣೆ
ಸಂಗ್ರಹ ಚಿತ್ರ
Published On :

ಚಾಮರಾಜನಗರ: ವಿದ್ಯಾಗಮ‌ ಕಲಿಕೆ ವೇಳೆ ಕೆಲ ವಿದ್ಯಾರ್ಥಿಗಳನ್ನು ಕೊಠಡಿಯಿಂದ ಹೊರಗಿಟ್ಟ ಆರೋಪದ ಮೇಲೆ ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಪ್ರಾಥಮಿಕ ಶಾಲೆಯ ಶಿಕ್ಷಕಿ ನಾಗಮಣಿ ಎಂಬುವರನ್ನು ಅಮಾನತುಗೊಳಿಸಲಾಗಿದೆ.

ಅಸ್ಪೃಶ್ಯತೆ ಆಚರಣೆ ಖಂಡಿಸಿ ಕರ್ನಾಟಕ ವಿದ್ಯಾರ್ಥಿ ಯುವ ವೇದಿಕೆಯಿಂದ ಪ್ರತಿಭಟನೆಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಮಹದೇವ ನಾಯಕ ಅವರನ್ನು ಕೂತುನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆ ಮಾಡಲಾಗಿದೆ. 

ಅ. 1ರಂದು ಚಿಕ್ಕಾಟಿ ಗ್ರಾಮದ ಕನಕ ಭವನದಲ್ಲಿ ಶಿಕ್ಷಣ ಇಲಾಖೆಯು ಆರಂಭಿಸಿದ್ದ ವಿದ್ಯಾಗಮ ಕಲಿಕಾ ಕೇಂದ್ರಕ್ಕೆ ದಲಿತ ವಿದ್ಯಾರ್ಥಿಗಳನ್ನು ಸೇರಿಸಬಾರದು ಎಂದು ಸ್ಥಳೀಯ ಮುಖಂಡರೊಬ್ಬರು ಶಾಲಾ ಶಿಕ್ಷಕರಿಗೆ ತಾಕೀತು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕನಕ ಭವನದ ಒಳಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಅವಕಾಶ ನೀಡದೆ ಹೊರಗೆ ಕೂರಿಸಿ ಪಾಠ ಬೋಧನೆ ಮಾಡಿದ ಆರೋಪ ಕೇಳಿ ಬಂದಿತ್ತು.

ಪಾಠ ಕೇಳಲು ಹೋದ ದಲಿತ ಮಕ್ಕಳಿಗೆ ಅವಮಾನ ಪ್ರಕರಣ: 
ಚಿಕ್ಕಾಟಿ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಅಧಿಕಾರಿಗಳುಘಟನೆ ಸಂಬಂಧ ಬುಧವಾರ ಗ್ರಾಮಕ್ಕೆ ಭೇಟಿ ನೀಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಸಿ.ಶಿವಮೂರ್ತಿ ಅಲ್ಲಿನ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರಿಂದ ಹೇಳಿಕೆ ಪಡೆದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ವರದಿ ಸಲ್ಲಿಸಿದ್ದರು 

ವರದಿ: ಗುಳಿಪುರ ನಂದೀಶ ಎಂ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.