ರಿವರ್ಸ್ ಗೇರ್ ನಲ್ಲಿದ್ದ ಕಾರು ಚಲಿಸಿ ಮರದ ನಡುವೆ ಸಿಲುಕಿದ ಮಹಿಳೆ ಸಾವು!
ಬಾಗಿಲು ತೆರೆದು ಆನ್ ಮಾಡಿದ ಕೂಡಲೇ ರಿವರ್ಸ್ ಗೇರ್ ನಲ್ಲಿದ್ದ ಕಾರು ಬಾಗಿಲು ಮತ್ತು ಮರದ ನಡುವೆ ಸಿಲುಕಿಕೊಂಡು ಮಹಿಳೆಯೊಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಸದಾಶಿವನಗರ ಸಮೀಪ ನಡೆದಿದೆ.

ಬೆಂಗಳೂರು: ಬಾಗಿಲು ತೆರೆದು ಆನ್ ಮಾಡಿದ ಕೂಡಲೇ ರಿವರ್ಸ್ ಗೇರ್ ನಲ್ಲಿದ್ದ ಕಾರು ಬಾಗಿಲು ಮತ್ತು ಮರದ ನಡುವೆ ಸಿಲುಕಿಕೊಂಡು ಮಹಿಳೆಯೊಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಸದಾಶಿವನಗರ ಸಮೀಪ ನಡೆದಿದೆ.
ಬಿಇಎಲ್ ರಸ್ತೆ ಆರ್'ಕೆ ಗಾರ್ಡನ್ 4ನೇ ಕ್ರಾಸ್ ನಂದಿನಿ ರಾವ್ (45) ಮೃತ ದುರ್ದೈವಿ. ಮನೆ ಮುಂದೆ ನೆರಳಿಗೆ ಕಾರನ್ನು ನಿಲ್ಲಿಸಲು ಬುಧವಾಹ ಮಧ್ಯಾಹ್ನ ನಂದಿನಿ ತೆರಳಿದ್ದಾಗ ಈ ದಾರುಣ ಘಟನೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನಂದಿನಿ ಅವರ ಪತಿ ರಾಜೇಶ್ ಬುಧವಾರ ಮಧ್ಯಾಹ್ನ 2.30ರ ಸುಮಾರಿಗೆ ಮಗುವಿಗೆ ಸ್ನಾನ ಮಾಡಿಸುತ್ತಿದ್ದರು. ಈ ವೇಳೆ ಮನೆಯ ಮುಂದೆ ಮರದಡಿ ನಿಲ್ಲಿಸಿದ್ದ ಹೊಂಡಾ ಸಿಟಿ ಕಾರಿಗೆ ಬಿಸಿಲು ಬೀಳುತ್ತಿದ್ದ ಕಾರಣ, ಕಾರನ್ನು ಪಕ್ಕಕ್ಕೆ ನಿಲ್ಲಿಸಲು ನಂದಿನಿ ಬಂದಿದ್ದರು.
ಮನೆ ಮುಂದೆ ಇಳಿಜಾರು ಪ್ರದೇಶವಿರುವ ಕಾರಣ ರಿವರ್ಸ್ ಗೇರ್ ನಲ್ಲೇ ಕಾರನ್ನು ನಿಲ್ಲಿಸಲಾಗಿತ್ತು. ಬಾಗಿಲು ತೆರೆದು ಹೊರಗಿನಿಂದಲೇ ನಂದಿನಿ ಕಾರನ್ನು ಸ್ಟಾರ್ಟ್ ಮಾಡಿದ್ದಾರೆ. ರಿವರ್ಸ್ ಗೇರ್ ನಲ್ಲಿದ್ದ ಕಾರಣಕ್ಕೆ ತಕ್ಷಣವೇ ಕಾರು ಚಲಿಸಿದೆ. ಅನಿರೀಕ್ಷಿತ ಘಟನೆಯಿಂದ ಅವರು ಪಾರಾಗುವ ವೇಳೆಗೆ ಕಾರಿನ ಬಾಗಿಲು ಬಡಿದಿದೆ.
ಬಾಗಿಲು ಸಮೇತ ಅವರು ಸಾಗಿದ್ದು, ಕಾರು ಮತ್ತು ಮರದ ನಡುವೆ ಅವರು ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲೇ ಅವರು ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೊಂಡಾ ಸಿಟಿ ಆಗಿದ್ದರಿಂದ ಅವುಗಳ ರಿಸರ್ವ್ ಗೇರ್ ನಲ್ಲಿದ್ದರು ಗರಿಷ್ಠ ಪ್ರಮಾಣದ ವೇಗ ಮಿತಿಯಲ್ಲಿರುತ್ತದೆ. ಹೀಗಾಗಿ ಆನ್ ಮಾಡಿದ ಕೂಡಲೇ ಕಾರು ಚಲಿಸಿದಾಗ ಅವರಿಗೆ ನಿಯಂತ್ರಿಸಲು ಸಾಧ್ಯವವಾಗಿಲ್ಲ. ಅವರು ತಪ್ಪಿಸಿಕೊಳ್ಳಲೂ ಕೂಡ ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಈ ಸಂಬಂಧ ಸದಾಶಿವಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


