ಗ್ರಾಮೀಣ ಭಾಗದಲ್ಲಿರುವ ಖಾಸಗಿ ಶಾಲೆಗಳ ನಿರ್ಲಕ್ಷ್ಯ: ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಆರೋಪ
ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೂ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿರುವ ಖಾಸಗಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಅನುದಾನ ರಹಿಸ ಖಾಸಗಿ ಶಾಲೆಗಳ ಸಂಘ ಆರೋಪಿಸಿದೆ.

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೂ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿರುವ ಖಾಸಗಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಅನುದಾನ ರಹಿಸ ಖಾಸಗಿ ಶಾಲೆಗಳ ಸಂಘ ಆರೋಪಿಸಿದೆ.
ಪೋಷಕರು ಪಾವತಿಸಬೇಕಾದ ಅವಧಿಯ ಶುಲ್ಕದ ಆದೇಶವು ಇತ್ತೀಚೆಗೆ ಬಂದಿದೆ, ಆದರೆ ಬೆಂಗಳೂರಿನಲ್ಲಿ ಬಹುತೇಕ ಶಾಲೆಗಳು ಈಗಾಗಲೇ ಮೊದಲ ಹಂತದ ಶುಲ್ಕವನ್ನು ಕಟ್ಟಿಸಿಕೊಂಡಿವೆ, ಗ್ರಾಮೀಣ ಭಾಗದಲ್ಲಿ ನಾವು ಶಿಕ್ಷಕರ ವೇತನ ಪಾವತಿಸಬೇಕಾಗಿದೆ, ತರಗತಿಗಳನ್ನು ಆರಂಭಿಸಲು ಸಿಲ್ಲಬಸ್ ಮತ್ತು ವೇಳಾ ಪಟ್ಟಿಯನ್ನು ಇನ್ನೂ ನೀಡಿಲ್ಲ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಶಿಧರ್ ಬೈಂದೂರು ಆರೋಪಿಸಿದ್ದಾರೆ.
ಅನುದಾನ ರಹಿತ ಶಾಲೆಗಳಲ್ಲಿ ಐದು ಲಕ್ಷಕ್ಕಿಂತ ಅಧಿಕ ಶಿಕ್ಷಕರು ಕೆಲಸ ಮಾಡುತ್ತಿದ್ದು, ಕೊರೋನಾ ಕಾರಣದಿಂದಾಗಿ ಸುಮಾರು 600 ಶಾಲೆಗಳು ಈಗಾಗಲೇ ಮುಚ್ಚಿವೆ ಎಂದು ಸಂಘದ ಅಧ್ಯಕ್ಷ ಲೋಕೇಶ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


