ಡಿ.ಜೆ. ಹಳ್ಳಿ ಗಲಭೆ: ವಿಚಾರಣೆಗೆ ಹಾಜರಾಗುವಂತೆ ಕಾರ್ಪೋರೇಟರ್ ಗೆ ಸಿಸಿಬಿ ನೋಟಿಸ್
ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಫೇಸ್ಬುಕ್ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ಉಂಟಾದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಪುಲಿಕೇಶಿನಗರ ಕಾರ್ಪೋರೇಟರ್ ಜಾಕೀರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದಾರೆ.

ಬೆಂಗಳೂರು: ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಫೇಸ್ಬುಕ್ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ಉಂಟಾದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಪುಲಿಕೇಶಿನಗರ ಕಾರ್ಪೋರೇಟರ್ ಜಾಕೀರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದಾರೆ.
ಇಂದು ಜಾಕೀರ್ ಅವರು ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಪೊಲೀಸರ ಎದುರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಪೊಲೀಸರು ಈಗಾಗಲೇ ಒಂದು ಬಾರಿ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಈ ವೇಳೆ ಜಾಕೀರ್ ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು ಅದನ್ನು ಎಫ್ ಎಸ್ ಎಲ್ ಗೆ ರವಾನಿಸಿದ್ದರು. ಸದ್ಯ ಮೊಬೈಲ್ ನಲ್ಲಿ ಡಿಲೀಟ್ ಆದ ಕೆಲವು ಮೆಸೇಜ್ ಗಳು ರಿಟ್ರೈವ್ ಮಾಡಲಾಗಿದೆ.
ಈ ಸಂದೇಶದಲ್ಲಿ ಮಹತ್ವದ ಅಂಶಗಳು ಇರುವುದರಿಂದ ಮತ್ತೆ ಜಾಕೀರ್ ಅವರ ವಿಚಾರಣೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


