ಶಿಕ್ಷಣ ಸಚಿವರೇ, ಈಗಲಾದರೂ ಕಣ್ತೆರೆಯಿರಿ: ಸಿದ್ದರಾಮಯ್ಯ
ರಾಜ್ಯ ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಮುಗಿದು ಎರಡು ತಿಂಗಳುಗಳಾದರೂ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಇನ್ನೂ ನೇಮಕಾತಿ ಪತ್ರ ನೀಡಿಲ್ಲ.

ಬೆಂಗಳೂರು: ರಾಜ್ಯ ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಮುಗಿದು ಎರಡು ತಿಂಗಳುಗಳಾದರೂ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಇನ್ನೂ ನೇಮಕಾತಿ ಪತ್ರ ನೀಡಿಲ್ಲ.
ನೇಮಕಾತಿ ಆದೇಶ ಪತ್ರ ದೊರೆಯದೇ ಇರುವುದರಿಂದ ನೂರಾರು ಅಭ್ಯರ್ಥಿಗಳು ಮಳೆಯಲ್ಲಿಯೇ ಪಿಯುಸಿ ಮಂಡಳಿಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ಶಿಕ್ಷಣ ಸಚಿವರೇ, ಈಗಲಾದರೂ ಸಹ ಕಣ್ತೆರೆಯಿರಿ. ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಿ ಅವರ ಆತಂಕವನ್ನು ದೂರ ಮಾಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 10 ರಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ಸಿದ್ದರಾಮಯ್ಯ, ಸರ್ಕಾರದ ಅಧಿಕೃತ ಆದೇಶವಿದ್ದರೂ ಈ ಉಪನ್ಯಾಸಕರಿಗೆ ನೇಮಕಾತಿ ಆದೇಶ ನೀಡದಿರುವುದು ಸರ್ಕಾರಿ ಆದೇಶದ ಉಲ್ಲಂಘನೆಯಾಗುತ್ತದೆ.
ಕೂಡಲೇ ಕೌನ್ಸಿಲಿಂಗ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡುವ ಮೂಲಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರುಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


