ರಾಜ್ಯ

ಕೆ.ಕಲ್ಯಾಣ್ ಸಂಸಾರಕ್ಕೆ ಹುಳಿ ಹಿಂಡಿದ್ದ ಮಂತ್ರವಾದಿ ಶಿವಾನಂದ ವಾಲಿಯ 6 ಕೋಟಿ ರೂ.ಗೂ ಹೆಚ್ಚು ಆಸ್ತಿ ವಶಕ್ಕೆ

ಸ್ಯಾಂಡಲ್ ವುಡ್ ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಕಲಹ ಪ್ರಕರಣದ ಪ್ರಮುಖ ಆರೋಪಿ, ಮಂತ್ರವಾದಿ ಶಿವಾನಂದ ವಾಲಿಗೆ ಸೇರಿದ್ದ ಅಂದಾಜು 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿ, ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಡಾ. ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.

ಕೆ.ಕಲ್ಯಾಣ್ ಸಂಸಾರಕ್ಕೆ ಹುಳಿ ಹಿಂಡಿದ್ದ ಮಂತ್ರವಾದಿ ಶಿವಾನಂದ ವಾಲಿಯ 6 ಕೋಟಿ ರೂ.ಗೂ ಹೆಚ್ಚು ಆಸ್ತಿ ವಶಕ್ಕೆ
ಚಿತ್ರ ಸಾಹಿತಿ ಕೆ ಕಲ್ಯಾಣ್
Published On :

ಬೆಳಗಾವಿ: ಸ್ಯಾಂಡಲ್ ವುಡ್ ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಕಲಹ ಪ್ರಕರಣದ ಪ್ರಮುಖ ಆರೋಪಿ, ಮಂತ್ರವಾದಿ ಶಿವಾನಂದ ವಾಲಿಗೆ ಸೇರಿದ್ದ ಅಂದಾಜು 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿ, ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಡಾ. ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.

ನಗರದ ಮಾಳಮಾರುತಿ ‌ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಪೊಲೀಸರು ಕೆ.ಕಲ್ಯಾಣ್ ಅವರ ಪತ್ನಿ ಹಾಗೂ ಅತ್ತೆ, ಮಾವ ಅವರನ್ನು ರಕ್ಷಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಶಿವಾನಂದ ವಾಲಿಯನ್ನು ವಶಕ್ಕೆ ಪಡೆದು ಮಾಳಮಾರುತಿ ಠಾಣೆಯ ಸಿಪಿಐ ನೇತೃತ್ವದಲ್ಲಿ ತನಿಖೆ ಕೈಗೊಂಡು 9 ಮ್ಯಾಕ್ಸಿಕ್ಯಾಬ್, 350 ಗ್ರಾಂ ಚಿನ್ನಾಭರಣ, 6 ಕೆ.ಜಿ ಬೆಳ್ಳಿ ಸೇರಿ ಅಂದಾಜು 5 ರಿಂದ 6 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿ ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಹುಬ್ಬಳ್ಳಿ-ಧಾರವಾಡ, ಬೆಂಗಳೂರು ಸೇರಿ ಬೆಳಗಾವಿ ನಗರದಲ್ಲಿ ವಾಲಿಗೆ ಸೇರಿರುವ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದರು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಾನಂದ ವಾಲಿ ಎಂಬ ಮಂತ್ರವಾದಿಯನ್ನು ವಿಚಾರಣೆ ಮಾಡಿದ್ದೇವೆ, ಕೆ. ಕಲ್ಯಾಣ್ ಪತ್ನಿಗೆ ಕಂಟಕ ಇದೆ ಸರಿಪಡಿಸುವೆ ಎಂದು ಮನೆ ಕೆಲಸದವಳಾದ ಗಂಗಾ ಕುಲಕರ್ಣಿ ಬಳಸಿಕೊಂಡು ಆರೋಪಿ ಹಣ ಲಪಟಾಯಿಸಿದ್ದಾನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.