ಬೆಂಗಳೂರು ವಿವಿ ಬಿಕಾಂ 6ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ
ಬೆಂಗಳೂರು ವಿಶ್ವವಿದ್ಯಾಲಯದ ಅಧೀನದ ಕಾಲೇಜುಗಳಲ್ಲಿ ಸೋಮವಾರ ನಡೆಯಬೇಕಿದ್ದ ಬಿ.ಕಾಂ 6ನೇ ಸೆಮಿಸ್ಟರ್'ನ ಪ್ರಿನ್ಸಿಪಲ್ಸ್ ಆ್ಯಂಡ್ ಪ್ರಾಕ್ಟೀಸ್ ಆಫ್ ಆಡಿಟಿಂಗ್ ವಿಷಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಅಧೀನದ ಕಾಲೇಜುಗಳಲ್ಲಿ ಸೋಮವಾರ ನಡೆಯಬೇಕಿದ್ದ ಬಿ.ಕಾಂ 6ನೇ ಸೆಮಿಸ್ಟರ್'ನ ಪ್ರಿನ್ಸಿಪಲ್ಸ್ ಆ್ಯಂಡ್ ಪ್ರಾಕ್ಟೀಸ್ ಆಫ್ ಆಡಿಟಿಂಗ್ ವಿಷಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಸೋಮವಾರ ಮಧ್ಯಾಹ್ನ 2ಕ್ಕೆ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಳಲ್ಲಿ ಪರೀಕ್ಷೆಗೆ ಹಾಜರಾಗಿದ್ದರು. ಅಷ್ಟರಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಬೆಳಕಿಗೆ ಬಂದಿದ್ದರಿಂದ ಪರೀಕ್ಷೆಯನ್ನು ರದ್ದು ಮಾಡಿ ಮುಂದೂಡಲಾಗಿದೆ. ಶೀಘ್ರದಲ್ಲೇ ದಿನಾಂಕ ಗೊತ್ತು ಮಾಡಿ ವಿದ್ಯಾರ್ಥಿಗಳಿಗೆ ತಿಳಿಸುವುದಾಗಿ ಬೆಂಗಳೂರು ವಿಶ್ವವಿದ್ಯಾಲಯ ತಿಳಿಸಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಕೆ.ಆರ್.ವೇಣುಗೋಪಾಲ್ ಅವರು ಮಾತನಾಡಿ, ಈ ಸಂಬಂಧ ಜ್ಞಾನಭಾರತಿ ಮತ್ತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಸಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


