ಮೈಸೂರು: ಕೋವಿಡ್-19 ಚಿಕಿತ್ಸೆಗಾಗಿ ಹಾಸಿಗೆ ಸಂಖ್ಯೆ ಹೆಚ್ಚಳಕ್ಕೆ ಕ್ರಮವಹಿಸಲು ಸಚಿವ ಡಾ. ಕೆ.ಸುಧಾಕರ್ ಸೂಚನೆ
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಒಟ್ಟು 590 ಹಾಸಿಗೆ ಗಳು ಲಭ್ಯವಿದ್ದು,ಇನ್ನು ಒಂದು ವಾರದಲ್ಲಿ ಹೆಚ್ಚುವರಿಯಾಗಿ 428 ಹಾಸಿಗೆ ಅಳವಡಿಸಲಾಗುವುದು ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಮೈಸೂರು: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಒಟ್ಟು 590 ಹಾಸಿಗೆ ಗಳು ಲಭ್ಯವಿದ್ದು,ಇನ್ನು ಒಂದು ವಾರದಲ್ಲಿ ಹೆಚ್ಚುವರಿಯಾಗಿ 428 ಹಾಸಿಗೆ ಅಳವಡಿಸಲಾಗುವುದು ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆ ಉಂಟಾಗದಂತೆ ಎಚ್ಚರವಹಿಸಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗ ಳೊಂದಿಗೆ ಅಗತ್ಯ ವೈದ್ಯಕೀಯ ಸಲಕರಣೆಗಳನ್ನು ಅಳವಡಿಸಿ ಚಿಕಿತ್ಸೆ ಪ್ರಮಾಣವನ್ನು ಹೆಚ್ಚಿಸಬೇಕು ಹಾಗೂ ಸೋಂಕು ಧೃಡಪಟ್ಟ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಗುಣಮುಖರಾಗುವಂತೆ ಕ್ರಮ ಕೈಗೊಳ್ಳಿ ಎಂದರು.
ವೈದ್ಯಕೀಯ ಕಾಲೇಜುಗಳಲ್ಲಿ 178, ಜಿಲ್ಲಾಸ್ಪತ್ರೆಗಳಲ್ಲಿ 250,ಟ್ರಾ ಮಾ ಸೆಂಟರ್ ಗಳಲ್ಲಿ 260, 6 ತಾಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆ ಸೇರಿ ಜಿಲ್ಲೆಯಲ್ಲಿ ಒಟ್ಟು 1,318 ಹಾಸಿಗೆಗಳು ಕೋವಿಡ್ ಗೆ ಲಭ್ಯವಾಗಲಿದೆ.ಜೆಎಸ್‍ಎಸ್ ಸಂಸ್ಥೆಯಿಂದ 400 ಹಾಸಿಗೆ ದೊರೆಯಲಿದ್ದು,ಒಟ್ಟು 1,718 ಹಾಸಿಗೆ ಕೋವಿಡ್ ಚಿಕಿತ್ಸೆಗೆ ಸಿಗಲಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


