ಬೆಂಗಳೂರು ಗಲಭೆ ಪ್ರಕರಣ: ಈಗ ನನಗೆ ಹೆಚ್ಚು ಭಯವಾಗುತ್ತಿದೆ- ಶಾಸಕ ಅಖಂಡ ಶ್ರೀನಿವಾಸಮೂರ್ತಿ
ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿರುವ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಅವರ ಹೆಸರನ್ನು ಉಲ್ಲೇಖ ಮಾಡಿದ್ದಾರೆ.

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿರುವ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಅವರ ಹೆಸರನ್ನು ಉಲ್ಲೇಖ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರು, ಈಗ ನನಗೆ ಹೆಚ್ಚು ಭಯವಾಗುತ್ತಿದೆ. ಭದ್ರತೆಗಾಗಿ ಸರ್ಕಾರದ ಮೊರೆ ಹೋಗಲಾಗುತ್ತದೆ ಎಂದು ಹೇಳಿದ್ದಾರೆ.
ದಾಳಿ ನಿಜಕ್ಕೂ ಅನಿರೀಕ್ಷಿತವಾದದ್ದು. ಶಾಸಕನಾಗಿರುವ ನಾನು ನನ್ನ ಕ್ಷೇತ್ರದ ಪ್ರತೀ ವಾರ್ಡ್'ಗೂ ಭೇಟಿ ನೀಡುತ್ತೇನೆ. ಅದೇ ರೀತಿ ಸಂಪತ್ ರಾಜ್ ಅವರ ಜೊತೆಗೂ ಮಾತನಾಡುತ್ತಿದೆ. ನನ್ನ ಬಗ್ಗೆ ತಿಳಿದಿರುವ ವ್ಯಕ್ತಿ, ಹಗೆ ಸಾಧಿಸಲು ಕಾಯುತ್ತಿರುವ ವ್ಯಕ್ತಿ ಈ ರೀತಿ ದಾಳಿ ಮಾಡಲು ಸಾಧ್ಯ ಎಂದು ಹೇಳಿದ್ದಾರೆ.
ಚಾರ್ಜ್ ಶೀಟ್ ಬಳಿಕ ನನಗೆ ಹೆಚ್ಚು ಭಯವಾಗುತ್ತಿದೆ. ನನಗೆ ಈಗ ಹೆಚ್ಚು ಭದ್ರತೆ ಬೇಕಿದೆ. ಈ ಬಗ್ಗೆ ನಾನು ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸುತ್ತೇನೆ. ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪ ಅಥವಾ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ನನ್ನ ಭದ್ರತೆಯನ್ನು ಹೆಚ್ಚಿಸಬೇಕು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


