ಸತತ ಮಳೆ: ಸೊನ್ನಾ ಬ್ಯಾರೇಜ್ ನಿಂದ ಭೀಮಾ ನದಿಗೆ 8.10 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
ಮಹಾರಾಷ್ಟ್ರದ ಭೀಮಾದ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ 8.10 ಲಕ್ಷ ಕ್ಯೂಸೆಕ್ ಭಾರೀ ಪ್ರಮಾಣ ನೀರನ್ನು ಸೊನ್ನಾ ಬ್ಯಾರೇಜ್ ನಿಂದ ಭೀಮಾ ನದಿಗೆ ಶನಿವಾರ ಬಿಡುಗಡೆ ಮಾಡಲಾಗಿದೆ.

ಕಲಬುರಗಿ: ಮಹಾರಾಷ್ಟ್ರದ ಭೀಮಾದ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ 8.10 ಲಕ್ಷ ಕ್ಯೂಸೆಕ್ ಭಾರೀ ಪ್ರಮಾಣ ನೀರನ್ನು ಸೊನ್ನಾ ಬ್ಯಾರೇಜ್ ನಿಂದ ಭೀಮಾ ನದಿಗೆ ಶನಿವಾರ ಬಿಡುಗಡೆ ಮಾಡಲಾಗಿದೆ.
ಇದರಿಂದಾಗಿ, ಉಕ್ಕಿ ಹರಿಯುತ್ತಿರುವ ಭೀಮಾ ನದಿಯು ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮನೆಗಳು, ರಸ್ತೆ ಮೂಲಸೌಕರ್ಯ ಮತ್ತು ವಿದ್ಯುತ್ ಮಾರ್ಗಗಳನ್ನು ಹಾನಿಗೊಳಿಸಿದೆ.
ಕಲ್ಯಾಣ ಕರ್ನಾಟಕ ಮತ್ತು ಅವಿಭಜಿತ ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದರೂ, ಈ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿಯೇ ಮುಂದುವರೆದಿದೆ.
ಮಹಾರಾಷ್ಟ್ರದ ವೀರ್ ಮತ್ತು ಉಜ್ಜನಿ ಅಣೆಕಟ್ಟುಗಳು ಮತ್ತು ಅಫ್ಜಲ್‌ಪುರ ತಾಲ್ಲೂಕಿನ ಸೊನ್ನಾ ಬ್ಯಾರೇಜ್ ನಿಂದ ಭಾರೀ ಪ್ರಮಾಣದ ನೀರು ಹೊರಬಿಡಲಾಗುತ್ತಿರುವುದರಿಂದ ಚಿತ್ತಾಪುರ, ಅಫ್ಜಲ್‌ಪುರ, ಜೇವರ್ಗಿ ಮತ್ತು ಶಹಾಬಾದ್ ತಾಲ್ಲೂಕುಗಳ 100 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹದ ಭೀತಿ ಉಂಟಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


