ರಾಮನಗರ: ಮಾಗಡಿ ಯುವತಿಯದ್ದು ಕೊಲೆಯಲ್ಲ, ಮರ್ಯಾದಾ ಹತ್ಯೆ; ತಂದೆ, ಸಹೋದರನ ಬಂಧನ
ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮಾಗಡಿಯ 19 ವರ್ಷದ ಯುವತಿ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ರಾಮನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ರಾಮನಗರ: ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮಾಗಡಿಯ 19 ವರ್ಷದ ಯುವತಿ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ರಾಮನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಅ.8ರಂದು ನಾಪತ್ತೆಯಾಗಿದ್ದ ಯುವತಿ, ಅ.10ರಂದು ಆಕೆಯ ದೊಡ್ಡಪ್ಪನ ಜಮೀನಿನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಆಕೆಯ ಪ್ರಿಯಕರೇ ಈ ಹತ್ಯೆ ಮಾಡಿದ್ದಾನೆ ಎಂದು ಯುವತಿಯ ಪೋಷಕರು ಪೊಲೀಸ್ ದೂರು ದಾಖಲಿಸಿದ್ದರು.
ಅಲ್ಲದೇ, ಸಾಮಾಜಿಕ ಜಾಲತಾಣದಲ್ಲಿ ಈ ಪ್ರಕರಣವನ್ನು ಸಾಮೂಹಿಕ ಅತ್ಯಾಚಾರ ನಡೆಸಿ ಮಾಡಲಾಗಿರುವ ಹತ್ಯೆ ಎಂದು ಬಿಂಬಿಸಿದ್ದರು. ಈ ಪ್ರಕರಣವನ್ನು ಅತ್ಯಂತ ಸೂಕ್ಷ್ಮವಾಗಿ ಪರಿಗಣಿಸಿದ ಪೊಲೀಸರು ಗಂಭೀರ ತನಿಖೆ ನಡೆಸಿದ್ದರು. ಈ ವೇಳೆ ಯುವತಿಯನ್ನು ಆಕೆಯ ಪೋಷಕರೇ ಮರ್ಯಾದಾ ಹತ್ಯೆ ಮಾಡಿರುವ ಸತ್ಯ ಬಯಲಾಗಿದೆ.
ಪರಿಶಿಷ್ಟ ಜಾತಿಯ ಹುಡುಗನನ್ನು ಪ್ರೀತಿಸಿದ ಕಾರಣಕ್ಕೆ ಮಗಳನ್ನೇ ಹತ್ಯೆ ಮಾಡಲಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದ್ದು, ಈ ಹಿನ್ನೆಲೆಯಲ್ಲಿ ಯುವತಿಯ ತಂದೆ ಮತ್ತು ದೊಡ್ಡಪ್ಪನ ಮಗನನ್ನು ಪೊಲೀಸರು ಬಂಧಿಸಿದ್ದಾರೆ.
ಮಾಗಡಿ ತಾಲ್ಲೂಕಿನ ಕುದೂರು ಹೋಬಳಿಯ ಬೆಟ್ಟದಹಳ್ಳಿ ನಿವಾಸಿ ಕೃಷ್ಣಪ್ಪ (48) ಹಾಗೂ ಅವರ ಸಹೋದರನ ಮಗ ಚೇತನ್ (21) ಬಂಧಿತರು.
ಕೊಲೆಗೆ ಸಹಕರಿಸಿದ ಮತ್ತೊಬ್ಬ ಕಾನೂನಿನ ಸಂಘರ್ಷಕ್ಕೆ ಒಳಗಾದ ಬಾಲಕನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ತಿಂಗಳ 9ರಂದು ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ ಹೇಮಲತಾ (19) ಕಾಣೆಯಾಗಿದ್ದಾಳೆ ಎಂದು ಕೃಷ್ಣಪ್ಪ ಎಂಬವರು ಕುದೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದಾದ ಮರುದಿನವೇ ಅವರ ಸಹೋದರನ ತೋಟದಲ್ಲಿ ಯುವತಿಯ ಶವ ಪತ್ತೆಯಾಗಿತ್ತು.
ವ್ಯವಸ್ಥಿತ ಕೃತ್ಯ: ಒಕ್ಕಲಿಗ ಸಮುದಾಯಕ್ಕೆ ಸೇರಿದ ಹೇಮಲತಾ ಅದೇ ಗ್ರಾಮದ ಯುವಕನನ್ನು ಪ್ರೀತಿಸುತ್ತಿದ್ದರು. ಈ ಸಂಬಂಧ ಠಾಣೆಯಲ್ಲಿ ಹಿಂದೆಯೂ ರಾಜೀ ಸಂಧಾನ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


