ನೆರೆ ಪೀಡಿತ ಜಿಲ್ಲೆಗಳಲ್ಲಿ ಅಕ್ಟೋಬರ್ 21ರಂದು ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ
ಉತ್ತರ ಕರ್ನಾಟಕ ಕೆಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಪ್ರವಾಹದಿಂದ ಭಾರಿ ನಷ್ಟವುಂಟಾಗಿದ್ದು ಈ ಜಿಲ್ಲೆಗಳಲ್ಲಿ ಅ.21ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಮಾಡಲಿದ್ದಾರೆ.

ಬೆಂಗಳೂರು: ಉತ್ತರ ಕರ್ನಾಟಕ ಕೆಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಪ್ರವಾಹದಿಂದ ಭಾರಿ ನಷ್ಟವುಂಟಾಗಿದ್ದು ಈ ಜಿಲ್ಲೆಗಳಲ್ಲಿ ಅ.21ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಮಾಡಲಿದ್ದಾರೆ.
ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಸಮೀಕ್ಷೆ ನಡೆಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರವಾಹದಿಂದ 4 ಜಿಲ್ಲೆಗಳ ಹಲವು ಗ್ರಾಮಗಳು ಸಂಪೂರ್ಣ ಮತ್ತು ಭಾಗಶಃ ಮುಳುಗಿವೆ. ಜಿಲ್ಲಾಡಳಿತದಿಂದ ಪರಿಹಾರ ಕಾರ್ಯಾಚರಣೆ ಪ್ರಗತಿಯಲ್ಲಿದೆ. ನೇರವಾಗಿ ಪರಿಸ್ಥಿತಿ ಅರಿಯುವ ಉದ್ದೇಶದಿಂದ ವೈಮಾನಿಕ ಸಮೀಕ್ಷೆ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ವಾಯುಭಾರ ಕುಸಿತದಿಂದ ಈ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಇದರೊಂದಿಗೆ ಮಹಾರಾಷ್ಟ್ರದ ಜಲಾಶಯದಿಂದ ಕೃಷ್ಣಾ ಮತ್ತು ಭೀಮಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡಲಾಗಿದೆ. ಇದರಿಂದ ಈ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


