ಜಾತಿ ಜನಗಣತಿ ವರದಿ ಜಾರಿಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಹೋರಾಟಕ್ಕೆ ತೀರ್ಮಾನ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಜಾತಿಗಣತಿ ವರದಿ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹೇರುವ ಕಾರ್ಯತಂತ್ರಗಳ ಕುರಿತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ನಗರದಲ್ಲಿಂದು ಸಮಾಲೋಚನಾ ಸಭೆ ನಡೆಸಿತು.

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಜಾತಿಗಣತಿ ವರದಿ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹೇರುವ ಕಾರ್ಯತಂತ್ರಗಳ ಕುರಿತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ನಗರದಲ್ಲಿಂದು ಸಮಾಲೋಚನಾ ಸಭೆ ನಡೆಸಿತು.
ಲಾಲ್ ಬಾಗ್ ರಸ್ತೆಯಲ್ಲಿನ ಗೋಡ್ವಾಡ್ ಭವನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಕೆಎಸ್ ಈಶ್ವರಪ್ಪ, ಮಾಜಿ ಸಚಿವ ಎಚ್ ಎಂ ರೇವಣ್ಣ, ವಿಧಾನ ಪರಿಷತ್ ಸದಸ್ಯ ಕೆ ಪಿ ನಂಜುಂಡಿ, ಹಿಂದುಳಿದ ವರ್ಗಗಳ ವಿವಿಧ ಸ್ವಾಮೀಜಿಗಳು ಭಾಗವಹಿಸಿದ್ದರು.
ಹಿಂದುಳಿದ ವರ್ಗಗಳ ಆಯೋಗಕ್ಕೆ ತಕ್ಷಣವೇ ಅಧ್ಯಕ್ಷರನ್ನು ನೇಮಿಸುವ ಜತೆಗೆ ಜಾತಿಜನಗಣತಿ ಆಧಾರದ ಮೇಲೆ ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿರುವವರಿಗೆ ಕೂಡಲೇ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಮುಖ್ಯಮಂತ್ರಿಯಾಗಿದ್ದಾಗ ಸಾಮಾಜಿಕ, ಆರ್ಥಿಕ ಜಾತಿಜನಗಣತಿ ಸಮೀಕ್ಷೆ ನಡೆಸಲಾಗಿತ್ತು.ಈ ವರದಿ ಜಾರಿ ಮಾಡಿಸುವುದಾಗಿ ಸಚಿವ ಹಾಗೂ ಕುರುಬ ಸಮುದಾಯದ ಮುಖಂಡ ಕೆ.ಎಸ್.ಈಶ್ವರಪ್ಪ ಭರವಸೆ ನೀಡಿದ್ದಾರೆ. ಅವರ ಮಾತುಗಳ ಮೇಲೆ ನಂಬಿಕೆ ಇಡಲು ಸಾಧ್ಯವಿಲ್ಲ. ಹೀಗಾಗಿ ಜಾತಿಗಣತಿ ವರದಿ ಸ್ವೀಕರಿಸಿ ಅನುಷ್ಠಾನಕ್ಕೆ ತರಲು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


