ರಾಜ್ಯ

ಯುವ ಪತ್ರಕರ್ತ ಪವನ ಹೆತ್ತೂರು ಕೊರೋನಾದಿಂದ ಸಾವು

ಯುವ ಪತ್ರಕರ್ತ ಪವನ ಹೆತ್ತೂರು(36) ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಯುವ ಪತ್ರಕರ್ತ ಪವನ ಹೆತ್ತೂರು ಕೊರೋನಾದಿಂದ ಸಾವು
ಪವನ ಹೆತ್ತೂರು
Published On :

ಮೈಸೂರು: ಯುವ ಪತ್ರಕರ್ತ ಪವನ ಹೆತ್ತೂರು(36) ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಪ್ರಜಾವಾಣಿಯ ಮೈಸೂರು ಬ್ಯೂರೋ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪವನ ಅವರಿಗೆ ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕು ತಗುಲಿತ್ತು.

ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವನ ಅವರು ಚಿಕಿತ್ಸೆ ಫಲಿಸದೆ ಶನಿವಾರ ಮಧ್ಯರಾತ್ರಿ ವೇಳೆಗೆ ಕೊನೆಯುಸಿರೆಳೆದಿದ್ದಾರೆ. 

ಸಕಲೇಶಪುರ ತಾಲ್ಲೂಕಿನ ಹೆತ್ತೂರಿನವರಾಗಿದ್ದ ಪವನ ಸಜ್ಜನ ರಾಜಕಾರಣಿ ಕೃಷ್ಣಪ್ರಸಾದ್ ಕುಟುಂಬಕ್ಕೆ ಸೇರಿದ್ದರು. ಅವರ ತಂದೆ ಶಾಲಾ ಶಿಕ್ಷಕರಾಗಿದ್ದರು. ಮೃತ ಪವನ ಅವರಿಗೆ ಪತ್ನಿ, ಇಬ್ಬರು ಪುಟ್ಟ ಮಕ್ಕಳಿದ್ದಾರೆ. 

ಪವನ ವಿಜಯವಾಣಿ, ಕಸ್ತೂರಿ ನ್ಯೂಸ್‌ ಸೇರಿ ಅನೇಕ ಮಾದ್ಯಮಗಳಲ್ಲಿ ಕೆಲಸ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.