ಕೋವಿಡ್-19: ನವೆಂಬರ್ 12ರೊಳಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ತಲುಪುವ ಸಾಧ್ಯತೆ!
ರಾಜ್ಯದಲ್ಲಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸೋಂಕಿತರ ಸಂಖ್ಯೆ ಇದೇ ರೀತಿ ಮುಂದುವರೆದಿದ್ದೇ ಆದರೆ, ನವೆಂಬರ್ 12ರೊಳಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ಗಡಿದಾಟಲಿದೆ, ಮೃತರ ಸಂಖ್ಯೆ 12,800ಕ್ಕೆ ತಲುಪಲಿದೆ ಎಂದು ತಜ್ಞರು ನಡೆಸಿದ ಅಧ್ಯಯನದಲ್ಲಿ ಅಂದಾಜು ಮಾಡಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸೋಂಕಿತರ ಸಂಖ್ಯೆ ಇದೇ ರೀತಿ ಮುಂದುವರೆದಿದ್ದೇ ಆದರೆ, ನವೆಂಬರ್ 12ರೊಳಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ಗಡಿದಾಟಲಿದೆ, ಮೃತರ ಸಂಖ್ಯೆ 12,800ಕ್ಕೆ ತಲುಪಲಿದೆ ಎಂದು ತಜ್ಞರು ನಡೆಸಿದ ಅಧ್ಯಯನದಲ್ಲಿ ಅಂದಾಜು ಮಾಡಲಾಗಿದೆ.
ರಾಜ್ಯದಲ್ಲಿ ಮಾ. 8ರಂದು ಮೊದಲ ಕೋವಿಡ್ ಪ್ರಕರಣ ವರದಿಯಾಗಿತ್ತು. ಎಂಟು ತಿಂಗಳು ಕಳೆಯುವ ಮುನ್ನವೇ ಸೋಂಕಿತರ ಸಂಖ್ಯೆ 7.58 ಲಕ್ಷಕ್ಕೆ (ಅ.17) ತಲುಪಿದೆ. ಅದೇ ರೀತಿ, ಮೃತರ ಸಂಖ್ಯೆ 10,500ರ ಗಡಿ ದಾಟಿದೆ. ಸದ್ಯ ರಾಜ್ಯದಲ್ಲಿ ಶೇ 11.56 ರಷ್ಟು ಸೋಂಕು ದೃಢ ಪ್ರಮಾಣವಿದೆ. ಇದರ ಅನುಸಾರ ಸರ್ಕಾರೇತರ ಸಂಸ್ಥೆಯಾದ ಪ್ರಾಕ್ಸಿಮಾ ‘ಜೀವನ್ ರಕ್ಷಾ’ ಯೋಜನೆಯಡಿ ಅಧ್ಯಯನ ನಡೆಸಿದ್ದು, ಸೋಂಕು ಹಾಗೂ ಮರಣ ಪ್ರಕರಣಗಳ ಏರಿಕೆಯನ್ನು ಅಂದಾಜು ಮಾಡಿದೆ.
ಸಂಸ್ಥೆಯು ಪಬ್ಲಿಕ್ ಹೆಲ್ತ್ ಫೌಂಡೇಶನ್ ಆಫ್ ಇಂಡಿಯಾ ಹಾಗೂ ಭಾರತೀಯ ವೈದ್ಯಕೀಯ ಸಂಘದ ನೆರವು ಪಡೆದು ಸಂಸ್ಥೆಯು ಈ ಅಧ್ಯಯನ ನಡೆಸಿದೆ.
ಆಗಸ್ಟ್ 15ರ ವೇಳೆಗೆ ರಾಜ್ಯದಲ್ಲಿ ಕೋವಿಡ್ ಪೀಡಿತರ ಸಂಖ್ಯೆ 2,19,926ಕ್ಕೆ ತಲುಪಿತ್ತು. ಸೆಪ್ಟೆಂಬರ್ 12ರ ವೇಳೆಗೆ ದುಪ್ಪಟ್ಟಾಗಿ 4,40,411ಕ್ಕೆ ಏರಿಕೆಯಾಗಿತ್ತು. ಅಕ್ಟೋಬರ್ 12ರ ವೇಳೆಗೆ ಈ ಸಂಖ್ಯೆ 7,17,915ಕ್ಕೆ ತಲುಪಿತ್ತು. ಹೀಗಾಗಿ, ನ.12ಕ್ಕೆ ಕೋವಿಡ್ ಪ್ರಕರಣಗಳು 10 ಲಕ್ಷದ ಗಡಿ ದಾಟಲಿದೆ ಎಂದು ಸಂಸ್ಥೆ ಅಂದಾಜಿಸಿದೆ.
ಇದೇ ರೀತಿ, ಆಗಸ್ಟ್ 15ರಂದು 3,931 ಇದ್ದ ಮೃತರ ಸಂಖ್ಯೆ ಬಳಿಕ ಏರಿಕೆ ಕಂಡು, ಅ. 12ಕ್ಕೆ 10 ಸಾವಿರದ ಗಡಿ ದಾಟಿತ್ತು. ಇದರ ಅನುಸಾರವೇ ಮರಣ ಪ್ರಕರಣಗಳನ್ನು ಸಂಸ್ಥೆ ಲೆಕ್ಕ ಹಾಕಿದೆ.
ಸಿಲಿಕಾನ್ ಸಿಟಿ ಕೊರೋನಾ ವ್ಯಾಪಕವಾಗುತ್ತಿದ್ದು, ಬೆಂಗಳೂರು ನಗರದಲ್ಲಿ ಗರಿಷ್ಠ ಸಂಖ್ಯೆಯ ಸಕ್ರಿಯ ಪ್ರಕರಣಗಳನ್ನು ಹೊಂದಿದೆ. ಭಾರತದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 8% ಪಾಲನ್ನು ಬೆಂಗಳೂರು ಹೊಂದಿದೆ. ಇದರಂತೆ ನವೆಂಬರ್ ವೇಳೆಗೆ ಪ್ರಕರಣಗಳ ಸಂಖ್ಯೆ 4.2 ಲಕ್ಷಕ್ಕೆ ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಮುಂದಿನ4-6 ವಾರಗಳಲ್ಲಿ ಬೆಂಗಳೂರು ನಗರಕ್ಕೆ 13,000 ಆಮ್ಲಜನಕ ಹಾಸಿಗೆಗಳು, 10,000 ಐಸಿಯು ಹಾಸಿಗೆಗಳು ಮತ್ತು 6,500 ವೆಂಟಿಲೇಟರ್‌ಗಳ ಅಗತ್ಯತೆ ಬೀಳಬಹುದು ಎಂದು ಹೇಳಲಾಗುತ್ತಿದೆ.
ಬಿಬಿಎಂಪಿ ಸಾರ್ವಜನಿಕ ಆರೋಗ್ಯ ಉಸ್ತುವಾರಿ ರಂದೀಪ್ ಡಿ ಮಾತನಾಡಿ, ನಾವು ಪ್ರತಿದಿನ 35,000 ಪರೀಕ್ಷೆಗಳನ್ನು ನಡೆಸುತ್ತಿದ್ದೇವೆ. ಖಾಸಗಿ ಕೋವಿಡ್ ಆಸ್ಪತ್ರೆಗಳ ಸಂಖ್ಯೆಯನ್ನು 31 ರಿಂದ 49ಕ್ಕೆ ಹೆಚ್ಚಿಸಿದ್ದೇವೆ. ಶೀಘ್ರದಲ್ಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಐಸಿಯು ಹಾಸಿಗೆಗಳನ್ನು ಸೇರ್ಪಡೆಗೊಳಿಸಲಾಗುವುದು. ನಮ್ಮಲ್ಲಿ ಮೂಲಸೌಕರ್ಯಗಳ ಉತ್ತಮವಾಗಿದ್ದು, ಮತ್ತಷ್ಟು ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


