ಹಿರಿಯ ನಟ ಮುಖ್ಯಮಂತ್ರಿ ಚಂದ್ರುಗೆ 'ಮುರುಘಾಶ್ರೀ ಪ್ರಶಸ್ತಿ'
ರಂಗಭೂಮಿ, ಸಿನಿಮಾ ಕ್ಷೇತ್ರದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಸೇರಿ ಐವರನ್ನು ಈ ಸಾಲಿನ "ಮುರುಘಾಶ್ರೀ ಪ್ರಶಸ್ತಿ" ಗೆ ಆಯ್ಕೆ ಮಡಲಾಗಿದೆ.

ಚಿತ್ರದುರ್ಗ: ರಂಗಭೂಮಿ, ಸಿನಿಮಾ ಕ್ಷೇತ್ರದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಸೇರಿ ಐವರನ್ನು ಈ ಸಾಲಿನ "ಮುರುಘಾಶ್ರೀ ಪ್ರಶಸ್ತಿ" ಗೆ ಆಯ್ಕೆ ಮಡಲಾಗಿದೆ.
ಅಕ್ಟೋಬರ್ 24ರಂದು ಚಿತ್ರದುರ್ಗದ ಮುರುಘಾ ಮಠದ "ಶರಣ ಸಂಸ್ಕೃತಿ ಉತ್ಸವ"ದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು "ರಂಗಭೂಮಿ, ಸಿನಿಮಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಹಿರಿಯ ನಟ್ ಅಮುಖ್ಯಮಂತ್ರಿ ಚಂದ್ರು ಸೇರಿ ಐವರಿಗೆ ಈ ಸಾಲಿನ ಮುರುಘಾಶ್ರೀ ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಿದ್ದೇವೆ" ಎಂದರು.
ಮುಖ್ಯಮಂತ್ರಿ ಚಂದ್ರು ಅವರೊಂದಿಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್. ಬಿಲ್ಲಪ್ಪ, ಹುಲುಸೂರು ಗುರುಬಸವೇಶ್ವರ ಮಠದ ಶಿವಾನಂದ ಸ್ವಾಮೀಜಿ, ಮದ್ಯಪಾನ ವಿರುದ್ಧ ಹೋರಾಟದಲ್ಲಿ ಸಕ್ರಿಯವಾಗಿರುವ ಸ್ವರ್ಣ ಭಟ್ ಹಾಗೂ ಧರ್ಮದರ್ಶಿ ಎಸ್.ಷಣ್ಮುಖಪ್ಪ ಅವರುಗಳು ಈ ಗೌರವಕ್ಕೆ ಪಾತ್ರವಾಗಿದ್ದಾರೆ.
ಮುರುಘಾಶ್ರೀ ಪ್ರಶಸ್ತಿಯು 25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.
ಹರಿಯಾಣದ ಯುವತಿಗೆ ‘ಭರಮಣ್ಣನಾಯಕ ಶೌರ್ಯ ಪ್ರಶಸ್ತಿ'
ಹತ್ತು ಭಾಷೆಯಲ್ಲಿ ನಿರರ್ಗಳವಾಗಿ ಮಾತನಾಡಬಲ್ಲ ಸಾಮರ್ಥ್ಯ ಹೊಂದಿರುವ ಹರಿಯಾಣದ ಜಾಹ್ನವಿ ಪನ್ವಾರ್(17) ಅವರಿಗೆ ಈ ಸಾಲಿನ ಭರಮಣ್ಣನಾಯಕ ಶೌರ್ಯ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


