ಮಂಗಳೂರು: ವಾಣಿಜ್ಯ ಸಂಕೀರ್ಣದಲ್ಲಿ ಅಗ್ನಿ ಅನಾಹುತ, ಎರಡು ಅಂಗಡಿಗಳು ಭಸ್ಮ
ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ವಿಟ್ಲ ಪೇಟೆಯಲ್ಲಿ ನಡೆದಿದೆ.

ಮಂಗಳೂರು: ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ವಿಟ್ಲ ಪೇಟೆಯಲ್ಲಿ ನಡೆದಿದೆ.
ವಿಟ್ಲದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸಮೀಪದ ಕೆಜಿ ಟವರ್ಸ್ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡವಾಗಿದ್ದು ಎಂಪಿ ಹಾರ್ಡ್ ವೇರ್ ಹಾಗೂ ಪೇಂಟ್ ಮತ್ತೊಂದು ಬೇಕರಿ ಸುಟ್ಟು ಕರಕಲಾಗಿದೆ.

ಮೊದಲು ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ನಂತರದಲ್ಲಿ ಪಕ್ಕದಲ್ಲಿನ ಬೇಕರಿಗೆ ವ್ಯಾಪಿಸಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


