ರಾಜ್ಯ

ರಾಜ್ಯದಲ್ಲಿ ಅತಿವೃಷ್ಟಿಯಿಂದ ರೂ.3000 ಕೋಟಿ ನಷ್ಟ: ಕಂದಾಯ ಸಚಿವ ಆರ್.ಅಶೋಕ್

ನಾಲ್ಕೈದು ದಿನದ ವರದಿ ಪ್ರಕಾರ ರಾಜ್ಯದಲ್ಲಿ ಮಳೆಯಿಂದಾಗಿ ಸುಮಾರು ರೂ.3000 ಕೋಟಿ ಹಾನಿಯಾಗಿದೆ. 10 ಜನ, ನೂರಕ್ಕೂ ಹೆಚ್ಚು ಜಾನುವಾರು ಮೃತಪಟ್ಟಿದ್ದು, 8 ಸಾವಿರ ಜನ ಪರಿಹಾರ ಕೇಂದ್ರದಲ್ಲಿದ್ದಾರೆಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.

ರಾಜ್ಯದಲ್ಲಿ ಅತಿವೃಷ್ಟಿಯಿಂದ ರೂ.3000 ಕೋಟಿ ನಷ್ಟ: ಕಂದಾಯ ಸಚಿವ ಆರ್.ಅಶೋಕ್
ಸಚಿವ ಆರ್.ಅಶೋಕ
Published On :

ಬೆಳಗಾವಿ: ನಾಲ್ಕೈದು ದಿನದ ವರದಿ ಪ್ರಕಾರ ರಾಜ್ಯದಲ್ಲಿ ಮಳೆಯಿಂದಾಗಿ ಸುಮಾರು ರೂ.3000 ಕೋಟಿ ಹಾನಿಯಾಗಿದೆ. 10 ಜನ, ನೂರಕ್ಕೂ ಹೆಚ್ಚು ಜಾನುವಾರು ಮೃತಪಟ್ಟಿದ್ದು, 8 ಸಾವಿರ ಜನ ಪರಿಹಾರ ಕೇಂದ್ರದಲ್ಲಿದ್ದಾರೆಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. 

ಕಂದಾಯ ಸಚಿವ ಹಾಗೂ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್. ಅಶೋಕ ಅವರು ನಿನ್ನೆಯಷ್ಟೇ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿ ಅತಿವೃಷ್ಟಿ, ಪ್ರವಾಹ ಕಾರ್ಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು., 

ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದಿಂದ ಎದುರಾಗಿರುವ ಅತಿವೃಷ್ಟಿ ಮತ್ತು ಪರಿಹಾರದ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು ಈ ವರ್ಷ ಆಗಸ್ಟ್ ನಲ್ಲಿ ಶೇಕಡಾ 139ರಷ್ಟು ಅಧಿಕ ಮಳೆಯಿಂದ ಪ್ರವಾಹ ಸ್ಥಿತಿ ಎದುರಾಗಿತ್ತು. ಸದ್ಯಕ್ಕೆ ಪ್ರವಾಹ ಸ್ಥಿತಿಯಿಲ್ಲ ಎಂದು ತಿಳಿಸಿದರು.

ಹುಕ್ಕೇರಿಯಲ್ಲಿ ಮಾತ್ರ ಅತಿವೃಷ್ಟಿಯಿಂದ ಒಬ್ಬ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ 4,619 ಮನೆಗಳಿಗೆ ಹಾನಿಯಾಗಿದ್ದು, ಸದ್ಯಕ್ಕೆ ಕಾಳಜಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿಲ್ಲ. 14 ಸಾವಿರ ರೈತರಿಗೆ 6.40 ಕೋಟಿ ಬೆಳೆ ಪರಿಹಾರ ಪಾವತಿಸಲಾಗಿದ್ದು, ಉಳಿದವರಿಗೆ ಶೀಘ್ರ ಪಾವತಿಸಲಾಗುವುದು. 1.66 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ ನಡೆದಿದ್ದು, ಇದಾದ ಬಳಿಕ ಹಾನಿಯ ಸಮಗ್ರ ವರದಿಯನ್ನು ಸಲ್ಲಿಸಲಾಗುವುದು. ಹತ್ತು ದಿನಗಳಲ್ಲಿ ಪರಿಹಾರ ವಿತರಣಾ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ರಾಜ್ಯದಲ್ಲಿ ಹಣದ ಅಭಾವ ಇಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ.666 ಕೋಟಿ ಹಣ ಜಮೆ ಮಾಡಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಖಾತೆಯಲ್ಲಿ ರೂ.88 ಕೋಟಿ ಹಣವಿದೆ. ಅಲ್ಲದೇ ಕಲಬುರಗಿಯಲ್ಲಿ ರೂ.20 ಕೋಟಿ, ಯಾದಗಿರಿ ರೂ.16 ಕೋಟಿ, ಬಾಗಲಕೋಟೆ ರೂ.33 ಕೋಟಿ, ಕೊಡಗಿನಲ್ಲಿ ರೂ.68 ಕೋಟಿ ಹಣವಿದೆ ಎಂದಿದ್ದಾರೆ. 

ನಾನು ಕಂದಾಯ ಸಚಿವನಾದ ಮೇಲೆ ಜಿಲ್ಲಾಧಿಕಾರಿಗಳು ಪಿಡಿ ಖಾತೆಯಲ್ಲಿ ಹಣ ಆದ ಮೇಲೆ ಪತ್ರ ಬರೆಯುತ್ತಿದ್ದರು. ಆ ಹಣ ಕಳುಹಿಸಿಕೊಡಲು ನಾಲ್ಕೈದು ತಿಂಗಳು ಆಗುತ್ತಿತ್ತು. ಆದರೆ, ಈಗ ಹಾಗೆ ಆಗೋಲ್ಲ ರೂ.5 ಕೋಟಿಗಿಂತ ಕಡಿಮೆ ಇರುವ ಯಾವ ಯಾವ ಜಿಲ್ಲೆಯಲ್ಲಿ ಯಾವುದೇ ಡಿಸಿಯ ಅನುಮತಿ ಕೇಳದೆ ನಾವೇ ಹಣ ನೀಡುತ್ತೇವೆಂದು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.