ರಾಜ್ಯ

ಸ್ಯಾಂಡಲ್ ವುಡ್ ನಟಿಯರನ್ನು ಬಿಡುಗಡೆಗೊಳಿಸುವಂತೆ ನ್ಯಾಯಾಧೀಶರಿಗೆ ಬೆದರಿಕೆ ಪತ್ರ: ಇಬ್ಬರ ಬಂಧನ

ಡ್ರಗ್ ಕೇಸಿನಲ್ಲಿ ಜೈಲಿನಲ್ಲಿರುವ ಇಬ್ಬರು ಸ್ಯಾಂಡಲ್ ವುಡ್ ನಟಿಯರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಸ್ಯಾಂಡಲ್ ವುಡ್ ನಟಿಯರನ್ನು ಬಿಡುಗಡೆಗೊಳಿಸುವಂತೆ ನ್ಯಾಯಾಧೀಶರಿಗೆ ಬೆದರಿಕೆ ಪತ್ರ: ಇಬ್ಬರ ಬಂಧನ
ನಟಿ ರಾಗಿಣಿ ಹಾಗೂ ಸಂಜನಾ
Published On :

ಬೆಂಗಳೂರು: ಡ್ರಗ್ ಕೇಸಿನಲ್ಲಿ ಜೈಲಿನಲ್ಲಿರುವ ಇಬ್ಬರು ಸ್ಯಾಂಡಲ್ ವುಡ್ ನಟಿಯರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ತುಮಕೂರು ಜಿಲ್ಲೆ ತಿಪಟೂರಿನ ರಾಜಶೇಖರ್ ಹಾಗೂ ಗುಬ್ಬಿ ತಾಲೂಕಿನ ಹಾಗಲವಾಡಿಯ ವೇದಾಂತ್ ರಮೇಶ್ ಬಂಧಿತ ಆರೋಪಿಗಳು.

ಇಬ್ಬರನ್ನೂ ಗುಬ್ಬಿ ತಾಲೂಕಿನ ಚೇಳೂರಿನಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ.

ಆರೋಪಿಗಳು ನಿನ್ನೆ ಡಿಟೊನೇಟರ್ ಮಾದರಿಯ ವಸ್ತುವನ್ನು ಪತ್ರದೊಳಗಿಟ್ಟು ಡ್ರಗ್ ಮತ್ತು ನಾರ್ಕೊಟಿಕ್ ಕೇಸುಗಳಿಗೆ ಸಂಬಂಧಪಟ್ಟ ವಿಶೇಷ ಕೋರ್ಟ್ ನ ನ್ಯಾಯಾಧೀಶರಿಗೆ  ಬೆದರಿಕೆ ಹಾಕಿದ್ದರು.  ನ್ಯಾಯಾಧೀಶ ಜಿ ಎಂ ಶೀನಪ್ಪ ಅವರ ವಿಳಾಸಕ್ಕೆ ಅಂಚೆ ಮೂಲಕ ಪತ್ರ ಬಂದಿದ್ದು, ಅದನ್ನು ಅವರು ತೆರೆದು ನೋಡಿದಾಗ, ಸಣ್ಣ ಡಿಟೊನೇಟರ್ ರೀತಿಯ ವಸ್ತುವಿನೊಂದಿಗೆ ಬೆದರಿಕೆ ಪತ್ರವನ್ನು ಕೂಡ ಬರೆಯಲಾಗಿತ್ತು. ಸ್ಫೋಟಕಗಳನ್ನು ಬಳಸಿ ನ್ಯಾಯಾಧೀಶರ ಕಾರನ್ನು ಸ್ಫೋಟಿಸಿ ಬೇಡಿಕೆ ಈಡೇರಿಸದಿದ್ದರೆ ಕೊಲ್ಲುವುದಾಗಿ ಪತ್ರದಲ್ಲಿ ಬೆದರಿಕೆ ಹಾಕಲಾಗಿತ್ತು.

ಪೋಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ದುಷ್ಕರ್ಮಿಗಳ ಹಿಡಿಯಲು ಶೇಷ ತಂಡಗಳನ್ನು ರಚಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.