ರೌಡಿ ಶೀಟರ್ ಬರ್ಬರ ಕೊಲೆ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಶಂಕೆ
ರೌಡಿಶೀಟರ್ನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ಘಟನೆ ನಡೆದಿದೆ.

ಮಂಡ್ಯ: ರೌಡಿಶೀಟರ್ನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ಘಟನೆ ನಡೆದಿದೆ. ಪಾಲಹಳ್ಳಿಯ ಹರೀಶ್ ಕಳ್ಳಪಚ್ಚಿ ಭೀಕರವಾಗಿ ಕೊಲೆಯಾಗಿರುವ ರೌಡಿಶೀಟರ್ ಆಗಿದ್ದಾನೆ.
ಗುರುವಾರ ರಾತ್ರಿ ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುವ ವೇಳೆ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಹರೀಶ್ನನ್ನು ಕಣ್ಣಿಗೆ ಖಾರದ ಪುಡಿ ಎರಚಿ ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಹರೀಶ್ ಮೃತದೇಹವನ್ನು ಪೊಲೀಸರು ಪರಿಶೀಲಿಸಿದ ಬಳಿಕ ಶವಾಗಾರಕ್ಕೆ ರವಾನಿಸಿದರು.
ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ. ನಡು ರಸ್ತೆಯಲ್ಲೇ ರೌಡಿಶೀಟರ್ನೋರ್ವನನ್ನು ಹತ್ಯೆಮಾಡಿರುವ ಸುದ್ದಿಯಿಂದ ಶ್ರೀರಂಗಪಟ್ಟಣ ವ್ಯಾಪ್ತಿಯ ಜನತೆ ಬೆಚ್ಚಿಬಿದ್ದಿದ್ದಾರೆ.ಹಳೇ ದ್ವೇಷದ ಹಿನ್ನೆಲೆಯಲ್ಲಿಯ ಈ ಹತ್ಯೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬಲೆಬೀಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


