ಕೋವಿಡ್ ನಿಯಮ ಕಟ್ಟುನಿಟ್ಟಿನ ಜಾರಿಗೆ ಅಧಿಕಾರಿಗಳ ನೇಮಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೊರೋನಾ ಸಾಂಕ್ರಾಮಿಕ ರೋಗ ನಿಯಂತ್ರಣ ನಿಯಮಗಳನ್ನು ಬೆಂಗಳೂರು ನಗರದಲ್ಲಿ ಕಟ್ಟುನಿಟ್ಟಿನ ಜಾರಿ ಮಾಡಲು ಅಧಿಕಾರಿಗಳ ತಂಡ ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಬೆಂಗಳೂರು: ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೊರೋನಾ ಸಾಂಕ್ರಾಮಿಕ ರೋಗ ನಿಯಂತ್ರಣ ನಿಯಮಗಳನ್ನು ಬೆಂಗಳೂರು ನಗರದಲ್ಲಿ ಕಟ್ಟುನಿಟ್ಟಿನ ಜಾರಿ ಮಾಡಲು ಅಧಿಕಾರಿಗಳ ತಂಡ ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ನಗರದಲ್ಲಿ ಕೋವಿಡ್-19 ಮಾರ್ಗಸೂಚಿಗಳ ಕಟ್ಟುನಿಟ್ಟಾಗಿ ಜಾರಿ ಮಾಡಲು ಬಿಬಿಎಂಪಿ ಹಾಗೂ ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ, ಅ.28ರೊಳಗೆ ಅಧಿಕಾರಿಗಳ ತಂಡ ರಚಿಸುವಂತೆ ನಿರ್ದೇಶಿಸಿದೆ.
ಬೆಂಗಳೂರಿನಲ್ಲಿ ಕೊರೋನಾ ನಿಯಮ ಜಾರಿಗೆ 198 ಮಾರ್ಷಲ್'ಗಳನ್ನು ನೇಮಕ ಮಾಡಿ ಸುಮ್ಮನಾದರೆ ಸಾಲದು. ಮಾರ್ಷಲ್ ಗಳು ಹೆಚ್ಚಿನ ಹೊರೆ ಅನುಭವಿಸುತ್ತಿದ್ದಾರೆ. 1.30 ಕೋಟಿ ಜನಸಂಖ್ಯೆ ಇರುವ ಇಡೀ ಬೆಂಗಳೂರನ್ನು 198 ಮಾರ್ಷಲ್ ಗಳು ನಿಭಾಯಿಸಲು ಸಾಧ್ಯವಾಗುವುದಿಲ್ಲ. ಈ ನಿಯಮಗಳನ್ನು ಜಾರಿಗೊಳಿಸುವ ಉದ್ದೇಶಕ್ಕೆ ಮೀಸಲಾದ ತಂಡವೊಂದನ್ನು ರಚಿಸಬೇಕು ಎಂದು ತಿಳಿಸಿದೆ.
ರ್ಯಾಲಿ ಮತ್ತು ಪ್ರತಿಭಟನೆಗಳನ್ನು ನಡೆಸಲು ಅನುಮತಿ ನೀಡುವಾಗ ನಿರ್ದಿಷ್ಟ ಷರತ್ತುಗಳನ್ನು ವಿಧಿಸಬೇಕು ಎಂದು ತಿಳಿಸಿದ ಪೀಠ ವಿಚಾರಣೆಯನ್ನು ನ.5ಕ್ಕೆ ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


