ಮೈಸೂರು ದಸರಾ 2020: ಕೊರೋನಾ ಎಫೆಕ್ಟ್ ನಿಂದ ಜಂಬೂ ಸವಾರಿ ಮೆರವಣಿಗೆಯಲ್ಲಿ ಕೇವಲ 2 ಸ್ಥಬ್ಧಚಿತ್ರಕ್ಕೆ ಅವಕಾಶ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಕೊರೋನಾ ಸಾಂಕ್ರಾಮಿಕದ ನಡುವೆ ನಡೆಯುತ್ತಿರುವ ಸರಳ ದಸರಾದಲ್ಲಿ ಈ ಬಾರಿ ಕೇವಲ 2 ಸ್ಥಬ್ಧಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಕೊರೋನಾ ಸಾಂಕ್ರಾಮಿಕದ ನಡುವೆ ನಡೆಯುತ್ತಿರುವ ಸರಳ ದಸರಾದಲ್ಲಿ ಈ ಬಾರಿ ಕೇವಲ 2 ಸ್ಥಬ್ಧಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಹೌದು.. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆ ಹಿನ್ನೆಲೆಯಲ್ಲಿ ಕೇವಲ ಅರಮನೆಯ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು, ಜಂಬೂ ಸವಾರಿಯ ಪ್ರಮುಖ ಆಕರ್ಷಣೆಯಾಗಿದ್ದ ಸ್ತಬ್ಧಚಿತ್ರಗಳನ್ನು ಎರಡಕ್ಕೆ ಸೀಮಿತಗೊಳಿಸಲಾಗಿದೆ. ಈ ಎರಡು ಸ್ಥಬ್ಧ ಚಿತ್ರಗಳ ಪೈಕಿ ಮೈಸೂರು ಜಿಲ್ಲಾ ಪಂಚಾಯತಿಯಿಂದ ಕೊರೊನಾ ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ಒಂದಾಗಿದ್ದು, ಮಹಾಮಾರಿ ಕೊರೊನಾವನ್ನು ತಡೆಯಲು ಕೊರೊನಾ ವಾರಿಯರ್ಸ್ಗಳ ಪಾತ್ರ ಅತಿ ಮುಖ್ಯ ಹೀಗಾಗಿ ಈ ಸ್ತಬ್ಧಚಿತ್ರವನ್ನು ಅವರಿಗಾಗಿ ಅರ್ಪಿಸಲಾಗಿದೆ. ಅಂತೆಯೇ ಇಡೀ ವಿಶ್ವ, ಕುಟುಂಬವನ್ನು ವೈದ್ಯರು ಕಾಪಾಡುತ್ತಿದ್ದಾರೆ ಎಂದು ಸಾರುವ ಚಿತ್ರ ಇದಾಗಿದೆ.
ಇನ್ನು ಮತ್ತೊಂದು ವಿಶೇಷ ಅಂದ್ರೆ ಅದು ಅರಮನೆ ವಾದ್ಯಗೋಷ್ಠಿಯ ನಿರ್ಮಾಣ ಮಾಡಲಾಗಿದೆ. ಇದನ್ನು ಆನೆ ಬಂಡಿ ಸ್ತಬ್ಧಚಿತ್ರ ಎನ್ನಲಾಗುತ್ತೆ. ಈ ಎರಡು ಸ್ತಬ್ಧಚಿತ್ರಗಳು ಮಾತ್ರ ಮೆರೆವಣೆಗೆಯಲ್ಲಿ ಭಾಗವಹಿಸಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


