ಹೊಸಕೆರೆಹಳ್ಲಿಯಲ್ಲಿ ಪ್ರವಾಹದಿಂದ ಪುಸ್ತಕಗಳನ್ನು ಕಳೆದುಕೊಂಡಿದ್ದ ಮೂವರು ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪ ನೆರವು
ಸಿಲಿಕಾನ್ ಸಿಟಿಯಲ್ಲಿ ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ಉಂಟಾಗಿದ್ದ ಪ್ರವಾಹಸದಲ್ಲಿ ಪುಸ್ಕಕಗಳನ್ನು ಕಳೆದುಕೊಂಡಿದ್ದ ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪ ಅವರು ನೆರವು ನೀಡಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ಉಂಟಾಗಿದ್ದ ಪ್ರವಾಹಸದಲ್ಲಿ ಪುಸ್ಕಕಗಳನ್ನು ಕಳೆದುಕೊಂಡಿದ್ದ ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪ ಅವರು ನೆರವು ನೀಡಿದ್ದಾರೆ.
ಮಹಾಮಳೆಗೆ ಹೊಸಕೆರೆಹಳ್ಳಿ ಸುತ್ತಮುತ್ತಲೂ ಪ್ರವಾಹದ ಪರಿಸ್ಥಿತಿ ಎದುರಾಗಿತ್ತು. ಈ ವೇಳೆ ವಿದ್ಯಾರ್ಥಿಗಳು ತಮ್ಮ ನೋಟ್ ಪುಸ್ತಕಗಳು ಹಾಗೂ ಪಠ್ಯ ಪುಸ್ತಕಗಳನ್ನು ಕಳೆದುಕೊಂಡಿರುವ ಕುರಿತು ಕೆಲ ಮಾಧ್ಯಮಗಳು ವರದಿ ಪ್ರಸಾರ ಮಾಡಿತ್ತು.
ಈ ವರದಿಯನ್ನು ಗಮನಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು ಹಾಗೂ ಆರ್ಥಿಕ ಸಹಾಯ ನೀಡಿದ್ದಾರೆ.
ತಮ್ಮ ಗೃಹ ಕಚೇರಿ ಕೃಷ್ಣಾಗೆ ಪುಸ್ಕಕ ಕಳೆದುಕೊಂಡಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಕರೆಸಿಕೊಂಡಿರುವ ಯಡಿಯೂರಪ್ಪ ಅವರು ಪುಸ್ತಕಗಳನ್ನು ವಿತರಿಸಿದ್ದಾರೆ. ನಷ್ಟಕ್ಕೆ ಒಳಗಾದ ಇತರೆ ಕುಟುಂಬಗಳಿಗೂ ಪರಿಹಾರದ ಚೆಕ್'ನ್ನು ಇದೇ ವೇಳೆ ವಿತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಂಜನಾ, ಸ್ಪಂದನಾ ಹಾಗೂ ರಮೇಶ್ ಎಂಬ ವಿದ್ಯಾರ್ಥಿಗಳಿಗೆ ಪುಸ್ಕತ ವಿತರಿಸಿದ ಯಡಿಯೂರಪ್ಪ ಅವರು ವಿದ್ಯಾಭ್ಯಾಸದತ್ತ ಗಮನ ಹರಿಸುವಂತೆ ತಿಳಿಸಿದ್ದಾರೆ. ಅಲ್ಲದೆ ಮುಂದೆ ಎಲ್ಲಾ ರೀತಿಯ ಸಹಾಯ ನೀಡುವ ಭರವಸೆಯನ್ನೂ ನೂಡಿದ್ದಾರೆಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


