ನವಂಬರ್ 17ಕ್ಕೆ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ಆರಂಭ ಖಚಿತ: ರಾಜ್ಯ ಸರ್ಕಾರ
ರಾಜ್ಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳನ್ನು ನವೆಂಬರ್ 17ರಂದು ಆರಂಭಿಸುವ ನಿರ್ಧಾರಕ್ಕೆ ಉನ್ನತ ಶಿಕ್ಷಣ ಇಲಾಖೆ ಬದ್ಧವಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳನ್ನು ನವೆಂಬರ್ 17ರಂದು ಆರಂಭಿಸುವ ನಿರ್ಧಾರಕ್ಕೆ ಉನ್ನತ ಶಿಕ್ಷಣ ಇಲಾಖೆ ಬದ್ಧವಾಗಿದೆ.
ಕೋವಿಡ್-19 ಅನ್ ಲಾಕ್ 5.0 ಮಾರ್ಗಸೂಚಿ ನವೆಂಬರ್ 30ರವರೆಗೆ ಜಾರಿಯಲ್ಲಿರುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಆದರೂ ಕೋವಿಡ್-19 ಪರಿಸ್ಥಿತಿ ನೋಡಿಕೊಂಡು ಮತ್ತು ಶಿಷ್ಟಾಚಾರ ಪಾಲನೆ ಮಾಡಿಕೊಂಡು ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಆಯಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿತ್ತು. ಅದರಂತೆ ಕರ್ನಾಟಕ ಸರ್ಕಾರ ಪದವಿ ಕಾಲೇಜುಗಳನ್ನು ನವೆಂಬರ್ 17ರಂದು ತೆರೆಯಲಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.
ಕಾಲೇಜುಗಳು ಕೂಡ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಕ್ಯಾಂಪಸ್ ಗಳನ್ನು ಮತ್ತು ತರಗತಿ ಕೊಠಡಿಗಳನ್ನು ಸಜ್ಜು ಮಾಡುತ್ತಿವೆ. ಆದರೆ ಹಾಸ್ಟೆಲ್ ಗಳನ್ನು ನಿರ್ವಹಿಸುವುದು ಕಷ್ಟವಾಗಿದೆ. ಇಲ್ಲಿ ವಿದ್ಯಾರ್ಥಿಗಳನ್ನು ಹೇಗೆ ಇರಿಸಿಕೊಳ್ಳುವುದು ಎಂಬ ಬಗ್ಗೆ ಸಂಬಂಧಪಟ್ಟವರ ಜೊತೆ ಇಲಾಖೆ ಚರ್ಚಿಸುತ್ತಿದೆ.
ಸದ್ಯಕ್ಕೆ ಇಲಾಖೆ ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ವಿಧಗಳಲ್ಲಿ ತರಗತಿಗಳನ್ನು ನಡೆಸಲಿದೆ. ಹಾಸ್ಟೆಲ್ ಗಳಲ್ಲಿ ಎಷ್ಟು ಮಂದಿ ದಾಖಲಾಗುತ್ತಾರೆ ಎಂದು ನೋಡಿಕೊಂಡು ಇಲಾಖೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ. ವಿದ್ಯಾರ್ಥಿಗಳಿಗೆ ಬಸ್ಸು ಸೇವೆ ಮತ್ತು ಹಾಸ್ಟೆಲ್ ಗಳನ್ನು ಆರಂಭಿಸುವಾಗ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


