ರಾಜ್ಯ

'ನನ್ನ ಕರ್ಮಕ್ಕೆ ಶಿಕ್ಷೆ ಆಗಿದೆ': ಕೆ. ಕಲ್ಯಾಣ್ ದಂಪತಿ ಕಲಹ ಪ್ರಕರಣದ ಆರೋಪಿ ಗಂಗಾ ಕುಲಕುರ್ಣಿ ಡೆತ್ ನೋಟ್

ಸ್ಯಾಂಡಲ್ ವುಡ್ ಚಿತ್ರ ಸಾಹಿತಿ ಕೆ ಕಲ್ಯಾಣ್ ದಾಂಪತ್ಯದಲ್ಲಿ ಹುಳಿ ಹಿಂಡಿದ ಆರೋಪ ಎದುರಿಸುತ್ತಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಪತ್ತೆಯಾಗಿದೆ.

'ನನ್ನ ಕರ್ಮಕ್ಕೆ ಶಿಕ್ಷೆ ಆಗಿದೆ': ಕೆ. ಕಲ್ಯಾಣ್ ದಂಪತಿ ಕಲಹ ಪ್ರಕರಣದ ಆರೋಪಿ ಗಂಗಾ ಕುಲಕುರ್ಣಿ ಡೆತ್ ನೋಟ್
ಗಂಗಾ ಕುಲಕರ್ಣಿ
Published On :

ಕೊಪ್ಪಳ: ಸ್ಯಾಂಡಲ್ ವುಡ್ ಚಿತ್ರ ಸಾಹಿತಿ ಕೆ ಕಲ್ಯಾಣ್ ದಾಂಪತ್ಯದಲ್ಲಿ ಹುಳಿ ಹಿಂಡಿದ ಆರೋಪ ಎದುರಿಸುತ್ತಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಪತ್ತೆಯಾಗಿದೆ.

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮರಾಠಿ ಭಾಷೆಯಲ್ಲಿ ಗಂಗಾ ಕುಲಕರ್ಣಿ ಡೆತ್‍ನೋಟ್ ಬರೆದಿಟ್ಟು, ನ್ಯಾಯಾಧೀಶರು ಹಾಗೂ ವಕೀಲರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ನನ್ನ ಕರ್ಮಕ್ಕೆ ನನಗೆ ಶಿಕ್ಷೆ ಆಗಿದೆ. ನನ್ನ ಮೇಲೆ ಪ್ರಕರಣಗಳು ದಾಖಲಾಗಿವೆ. ನನಗೆ ಇಬ್ಬರೂ ಮಕ್ಕಳಿದ್ದಾರೆ. ನನ್ನ ಮಕ್ಕಳನ್ನು ನೀವೇ ನೋಡಿಕೊಳ್ಳಿ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಈ ಮೂಲಕ ನನ್ನ ಮಕ್ಕಳ ಜವಾಬ್ದಾರಿ ನಿಮ್ಮದು ಎಂದು ನ್ಯಾಯಾಧೀಶರು ಮತ್ತು ವಕೀಲರಿಗೆ ಮನವಿ ಮಾಡಿದ್ದಾರೆ.

ಇಂದು ವಿಷ ಸೇವಿಸಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕುಲಕರ್ಣಿ, ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಾಯಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.