ಕರ್ನಾಟಕ: ಭದ್ರಾ ಅಭಯಾರಣ್ಯದಲ್ಲಿ ಹುಲಿ ಸಾವು, ಕಾದಾಟ ಶಂಕೆ
ಸುಮಾರು 5 ವರ್ಷದ ಹೆಣ್ಣು ಹುಲಿಯೊಂದು ಭದ್ರಾ ವನ್ಯಜೀವಿ ವಿಭಾಗದ ಹೆಬ್ಬೆ ವಲಯದ ತೇಗೂರುಗುಡ್ಡ ವ್ಯಾಪ್ತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು: ಸುಮಾರು 5 ವರ್ಷದ ಹೆಣ್ಣು ಹುಲಿಯೊಂದು ಭದ್ರಾ ವನ್ಯಜೀವಿ ವಿಭಾಗದ ಹೆಬ್ಬೆ ವಲಯದ ತೇಗೂರುಗುಡ್ಡ ವ್ಯಾಪ್ತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಹುಲಿ ಮೃತದೇಹ ಪತ್ತೆಯಾಗಿದ್ದು, 4-5 ದಿನಗಳ ಹಿಂದೆ ಸತ್ತಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಬೇರೊಂದು ಹುಲಿಯೊಂದಿಗೆ ಕಾದಾಟ ನಡೆಸಿದ ವೇಳೆ ಗಾಯಗೊಂಡು ಮೃತಪಟ್ಟಿರಬಹುದೆಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಭದ್ರಾ ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ತಾಕತ್ ಸಿಂಗ್ ರಣಾವತ್ ಅವರು ತಿಳಿಸಿದ್ದಾರೆ.
ಮಂಗಳವಾರ ಹುಲಿ ಶವ ಪತ್ತೆಯಾಗಿತ್ತು. ಶಿವಮೊಗ್ಗದಿಂದ ಪಶುವೈದ್ಯರು ಸ್ಥಳಕ್ಕೆ ಬರುವ ಹೊತ್ತಿಗೆ ಸಂಜೆ 6 ಗಂಟೆಯಾಗಿತ್ತು. ಕಾರ್ಯವಿಧಾನಗಳ ಮೂಲಕ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಹುಲಿಯ ಶವದ ಮೇಲೆ ಹಲ್ಲುಗಳ ಗುರುತುಗಳು ಪತ್ತೆಯಾಗಿವೆ ಎಂದಿದ್ದಾರೆ.
ಮಿಲನ ಕ್ರಿಯೆ ಮೂಲಕ ಸಾಮಾನ್ಯವಾಗಿ ತನ್ನ ಸಂತತಿಯನ್ನು ಬೆಳೆಸಲು ಹಾಗೂ ಪ್ರಾಬಲ್ಯ ಸಾಧಿಸಲು ಈ ರೀತಿಯ ಕಾದಾಟ ನಡೆಸುವುದು ಸಾಮಾನ್ಯ. ಕಳೆದ ಎರಡು ವರ್ಷಗಳಲ್ಲಿ ಎರಡು ಹುಲಿಗಳು ಸಾವನ್ನಪ್ಪಿವೆ. 2019 ರಲ್ಲಿ ಪತ್ತೆಯಾಗಿದ್ದ ಹುಲಿಯ ಶವ ಸ್ಥಳದಿಂದ 5 ಕಿ.ಮೀ ದೂರದಲ್ಲಿಯೇ ಹೆಣ್ಣು ಹುಲಿಯ ಶವ ಕೂಡ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


