ನವೆಂಬರ್ 1ನ್ನು ಬಾಲ್ಯವಿವಾಹ ವಿರೋಧಿ ದಿನವನ್ನಾಗಿ ಘೋಷಣೆ ಮಾಡಿ: ಮಕ್ಕಳ ಹಕ್ಕುಗಳ ಟ್ರಸ್ಟ್ ಆಗ್ರಹ
ನವೆಂಬರ್ 1 ನ್ನು ಬಾಲ್ಯವಿವಾಹ ವಿರೋಧಿ ದಿನವನ್ನಾಗಿ ಘೋಷಣೆ ಮಾಡಬೇಕೆಂದು ಬೆಂಗಳೂರಿನ ಮಕ್ಕಳ ಹಕ್ಕುಗಳ ಟ್ರಸ್ಟ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಬೆಂಗಳೂರು: ನವೆಂಬರ್ 1 ನ್ನು ಬಾಲ್ಯವಿವಾಹ ವಿರೋಧಿ ದಿನವನ್ನಾಗಿ ಘೋಷಣೆ ಮಾಡಬೇಕೆಂದು ಬೆಂಗಳೂರಿನ ಮಕ್ಕಳ ಹಕ್ಕುಗಳ ಟ್ರಸ್ಟ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಅನ್ನು ನವೆಂಬರ್ 1 ರಂದು ಜಾರಿಗೆ ತರಲಾಗಿತ್ತು. ಇದೇ ದಿನವನ್ನೇ ಬಾಲ್ಯವಿವಾಹ ವಿರೋಧಿ ದಿನವಾಗಿ ಸರ್ಕಾರ ಘೋಷಣೆ ಮಾಡಬೇಕೆಂದು ಮಕ್ಕಳ ಹಕ್ಕುಗಳ ಟ್ರಸ್ಟ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮನವಿ ಪತ್ರವನ್ನು ಸಲ್ಲಿಸಿದೆ.
ಕಾಯ್ದೆಯಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಹೆಣ್ಣು ಮಕ್ಕಳು ಮತ್ತು 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗರ ವಿವಾಹವನ್ನು ನಿಷೇಧಿಸಲಾಗಿದೆ. ಎಲ್ಲಾ ಬಾಲ್ಯ ವಿವಾಹಗಳನ್ನು ‘ವಾಯ್ಡ್ ಅಬ್ ಇನಿಷಿಯೋ' ಎಂದು ಘೋಷಿಸುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.
ಚಿಕ್ಕವಯಸ್ಸಿನಲ್ಲಿಯೇ ವಿವಾಹವಾಗುವ ಬಾಲಕಿಯರು ಶಿಕ್ಷಣ, ಆರೋಗ್ಯದ ಆರೈಕೆ, ಹಿಂಸಾಚಾರ ಸಹನೆ, ತಾರತಮ್ಯ, ಆರ್ಥಿಕ ಅವಲಂಬನೆಯಂತಹ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದರಿಂದ ಶಿಶುಗಳ ಮರಣ ಪ್ರಮಾಣ ಕೂಡ ಏರಿಕೆಯಾಗುತ್ತದೆ. ತಾಯಿಯಂದಿರ ಮರಣ ಕೇವಲ ಸಂಖ್ಯೆಯಾದರೆ, ಅದು ದೇಸದ ಅಭಿವೃದ್ಧಿಗೂ ಅಡ್ಡಿಯುಂಟೂ ಮಾಡುತ್ತದೆ ಎಂದು ಸಿಆರ್‌ಟಿಯ ಕಾರ್ಯನಿರ್ವಾಹಕ ನಿರ್ದೇಶಕ ವಾಸುದೇವ ಶರ್ಮಾ ಎನ್ ವಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


