ರಾಜ್ಯ

ಮಂಗಳೂರು ಹೋಟೆಲ್ ನಲ್ಲಿ ಗುಂಡಿನ ದಾಳಿ, ಕ್ಷುಲ್ಲಕ ಜಗಳದಲ್ಲಿ ಇಬ್ಬರಿಗೆ ಗಾಯ

ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ಹಲ್ಲೆಕೋರರ ಗುಂಪು ಗುಂಡು ಹಾರಿಸಿದ್ದು ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಮಂಗಳೂರಿನ ಫಳ್ನೀರ್ ನಲ್ಲಿರುವ ಎಂಎಫ್‌ಸಿ ಹೋಟೆಲ್‌ನಲ್ಲಿ ನಡೆದಿದೆ.

ಮಂಗಳೂರು ಹೋಟೆಲ್ ನಲ್ಲಿ ಗುಂಡಿನ ದಾಳಿ, ಕ್ಷುಲ್ಲಕ ಜಗಳದಲ್ಲಿ ಇಬ್ಬರಿಗೆ ಗಾಯ
Published On :

ಮಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ಹಲ್ಲೆಕೋರರ ಗುಂಪು  ಗುಂಡು ಹಾರಿಸಿದ್ದು ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಮಂಗಳೂರಿನ ಫಳ್ನೀರ್ ನಲ್ಲಿರುವ ಎಂಎಫ್‌ಸಿ ಹೋಟೆಲ್‌ನಲ್ಲಿ ನಡೆದಿದೆ.

ಗುಂಡಿನ ದಾಳಿಯಲ್ಲಿ ಹೋಟೆಲ್ ಸಿಬ್ಬಂದಿ್ ಸಾಹಿಲ್ ಹಾಗೂ ಸುರತ್ಕಲ್ ನಿವಾಸಿ ಸೈಫ್ ಗಾಯಗೊಂಡಿದ್ದಾರೆ.

ದಾಳಿಕೋರರು ಹೋಟೆಲ್ ಪೀಠೋಪಕರಣಗಳನ್ನು ಸಹ ನಾಶಪಡಿಸಿದ್ದು ಮತ್ತಿಬ್ಬರು ಸಿಬ್ಬಂದಿಗಳ ಮೇಲೂ ಹಲ್ಲೆ ಮಾಡಿದ್ದಾರೆ.

ಈ ಘಟನೆ  ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಘಟನೆಯಲ್ಲಿ ಭಾಗಿಯಾದವರೆನ್ನಲಾದ ಇಬ್ಬರನ್ನು ಬಂಧಿಸಲಾಗಿದೆ. ಇನ್ನಿಬ್ಬರು ಪರಾರಿಯಾಗಿದ್ದಾರೆ.

ಘಟನೆ ವಿವರ

ಹೋಟೆಲ್ ಗೆ ಗ್ರಾಹಕರಂತೆ ಆಗಮಿಸಿದ ಅಪರಿಚಿತರು ಸಮೋಸಾ ಕೇಳಿದ್ದಾರೆ.ಈ ವೇಳೆ ಹೋಟೆಲ್ ಸಿಬ್ಬಂದಿ ಹಾಗೂ ಅವರ ನಡುವೆ ಮಾತಿನ ಚಕಮಕಿ ನಡೆದಿದೆ.  ಈ ವೇಳೆ ಹೋಟೆಲ್ ನಿಂದ ಹೊರಬಂದ ವ್ಯಕ್ತಿಗಳು ತಮ್ಮ ಬಳಿ ಇದ್ದ ಪಿಸ್ತೂಲ್ ನಿಂದ ಶೂಟ್ ಮಾಡೀದ್ದಾರೆ.

ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.