ರಾಜ್ಯ

ಉಪಚುನಾವಣೆಯಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ ನೀಡಲಾಗುತ್ತದೆ: ಸಿಎಂ ಯಡಿಯೂರಪ್ಪ ಭರವಸೆ

ರಾಜರಾಜೇಶ್ವರಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆಯೇ ಮುನಿರತ್ನ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರ ಭರವಸೆ ನೀಡಿದ್ದಾರೆ.

ಉಪಚುನಾವಣೆಯಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ ನೀಡಲಾಗುತ್ತದೆ: ಸಿಎಂ ಯಡಿಯೂರಪ್ಪ ಭರವಸೆ
ಸಿಎಂ ಯಡಿಯೂರಪ್ಪ
Published On :

ಬೆಂಗಳೂರು: ರಾಜರಾಜೇಶ್ವರಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆಯೇ ಮುನಿರತ್ನ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರ ಭರವಸೆ ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೂಡಲೇ ಮುನಿರತ್ನ ಅವರಿಗೆ ನೂರಕ್ಕೆ ನೂರರಷ್ಟು ಸಚಿವ ಸ್ಥಾನವನ್ನು ನೀಡುತ್ತೇನೆ. ನಾವು ಯಾವುದೇ ಜಾತಿ ರಾಜಕಾರಣವನ್ನು ಮಾಡುತ್ತಿಲ್ಲ. ನಮ್ಮ ಸಂಪುಟದಲ್ಲಿ ಈಗಾಗಲೇ ಒಕ್ಕಲಿಗ ಸಚಿವರು ಇದ್ದಾರೆ. ಎಲ್ಲಾ ಸಮುದಾಯವನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆಂದು ಹೇಳಿದ್ದಾರೆ. 

ಉಪಚುನಾವಣೆ ಪೂರ್ಣಗೊಂಡ ಕೂಡಲೇ ದೆಹಲಿ ಹೋಗುತ್ತೇನೆ. ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆಯ ಬಗ್ಗೆ ದೆಹಲಿಗೆ ಹೋದ ಬಳಿಕ ಅಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 

ಸಚಿವ ಸಂಪುಟ ಈಗಾಗಲೇ ವಿಸ್ತರಣೆ ಮಾಡಬೇಕಿತ್ತು. ಬೇರೆ ಬೇರೆ ಕಾರಣಗಳಿಂದಾಗಿ ವಿಸ್ತರಣೆ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಉಪಚುನಾವಣೆ ಪೂರ್ಣಗೊಳ್ಳುತ್ತಿದ್ದಂತೆಯೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.