ಮೈಸೂರು: ಬೀಗ ಹಾಕಿದ ಮನೆಯಿಂದ 2 ಕೆಜಿ ಚಿನ್ನ ನಾಪತ್ತೆ!
ಅರಮನೆಗಳ ನಗರಿಯಲ್ಲಿ ವಿಚಿತ್ರವಾದ ಕಳವು ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬಾಗಿಲು ಹಾಕಿದ ಮನೆಯಿಂದ 2 ಕೆಜಿ ಚಿನ್ನಾಭರಣ ಕಾಣೆಯಾಗಿವೆ.

ಮೈಸೂರು: ಅರಮನೆಗಳ ನಗರಿಯಲ್ಲಿ ವಿಚಿತ್ರವಾದ ಕಳವು ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬಾಗಿಲು ಹಾಕಿದ ಮನೆಯಿಂದ 2 ಕೆಜಿ ಚಿನ್ನಾಭರಣ ಕಾಣೆಯಾಗಿವೆ.
ಮನೆಯ ಮಾಲೀಕ ವಿಜಯ್ ಕುಮಾರ್ ಎಂಬ ಉದ್ಯಮಿ ಕೋವಿಡ್ 19 ಸೋಂಕಿಗೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ತಾಯಿ ಸಹ ಸೋಂಕಿತರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಪರಿಸ್ಥಿತಿಯ ಲಾಭವನ್ನು ಪಡೆದುಕೊಂಡು, ಕುಟುಂಬಕ್ಕೆ ತಿಳಿದಿರುವ ಯಾರಾದರೂ ನಕಲಿ ಕೀಲಿ ಕೈ ಬಳಸಿ ಎರಡು ಕೆಜಿ ಚಿನ್ನ ಕಳವು ಮಾಡಿರಬಹುದು ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ.
ಸರಸ್ವತಿಪುರಂನ ಪೊಲೀಸ್ ಇನ್ಸ್‌ಪೆಕ್ಟರ್ ಮಂಗಳವಾರ ಮನೆಗೆ ಭೇಟಿ ನೀಡಿದ್ದು, ಬೆರಳಚ್ಚು ತಜ್ಞರು ಮತ್ತು ಶ್ವಾನ ದಳವೂ ಸಹ ಪರಿಶೀಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


