ರಾಜ್ಯ

ಬೆಂಗಳೂರು: ಮಾದಕವಸ್ತು ಮಾರುತ್ತಿದ್ದ ಮೂವರ ಬಂಧನ, 11 ಕೆ.ಜಿ ಗಾಂಜಾ,  4.40 ಲಕ್ಷ ನಗದು,ವಶ

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮತ್ತೆ ಮೂವರನ್ನು ಬಂಧಿಸಲಾಗಿದೆ.

ಬೆಂಗಳೂರು: ಮಾದಕವಸ್ತು ಮಾರುತ್ತಿದ್ದ ಮೂವರ ಬಂಧನ, 11 ಕೆ.ಜಿ ಗಾಂಜಾ,  4.40 ಲಕ್ಷ ನಗದು,ವಶ
Published On :

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮತ್ತೆ ಮೂವರನ್ನು ಬಂಧಿಸಲಾಗಿದೆ.

ಬಂಧಿತರನ್ನು ಮಹಮ್ಮದ್ ಅಲಗೀರ್, ಮಹಮ್ಮದ್ ರಿಪೂನ್ ಹಾಗೂ ಮೊಹರ್ ಅಲಿ ಎಂದು ಗುರುತಿಸಲಾಗಿದೆ.ಬಂಧಿತರು  ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಬೇಗೂರು ಪೋಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಬಂಧಿತರಿಂದ 4.40 ಲಕ್ಷ ನಗದು, 11 ಕೆಜಿ ಗಾಂಜಾ  ಸೇರಿದಂತೆ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಪಶ್ಚಿಮ ಬಂಗಾಳದಿಂದ ಮಾದಕವಸ್ತುಗಳನ್ನು ಬೆಂಗಳೂರಿಗೆ ತಂದು ಮಾರಾಟ ನಡೆಸಿದ್ದರು. ಇದೀಗ ಬೇಗೂರು ಪೋಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.