ಬೆಂಗಳೂರು: ಪೋಷಕರಿಗೆ ತಿಳಿಸದೆ ಪ್ರೀತಿಸಿ ವಿವಾಹವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ
ಪ್ರೀತಿಸಿ ವಿವಾಹವಾಗಿದ್ದ ಯುವತಿಯೊಬ್ಬಳು ಪತಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಪ್ರೀತಿಸಿ ವಿವಾಹವಾಗಿದ್ದ ಯುವತಿಯೊಬ್ಬಳು ಪತಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಬೇಲೂರು ಮೂಲದ ಸುಜಾತಾ ಆತ್ಮಹತ್ಯೆ ಮಾಡಿಕೊಂಡವರು. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಸುಶಾಂತ್ ಎಂಬಾತನನ್ನು ಪ್ರೀತಿಸುತ್ತಿದ್ದ ಸುಜಾತಾ ಬಳಿಕ ಮನೆಯವರಿಗೆ ತಿಳಿಸದೆ ಬೆಂಗಳೂರಿನಲ್ಲಿ ಮದುವೆಯಾಗಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.
ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿಯ ನಡುವೆ ಕ್ರಮೇಣ ಅಸಮಾಧಾನ, ಭಿನ್ನಾಭಿಪ್ರಾಯ ಉಂಟಾಗಿದೆ. ಈ ಮಧ್ಯೆ ಪತಿ ಸುಶಾಂತ್ ವರದಕ್ಷಿಣೆ ತರುವಂತೆ, ಪತ್ನಿಯ ಆಸ್ತಿ ನೀಡುವಂತೆ ಕೇಳುತ್ತಿದ್ದ. ಇದೇ ಕಾರಣದಿಂದ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂದು ಸುಜಾತಾ ಅವರ ಕುಟುಂಬದವರು ಆರೋಪಿಸಿದ್ದಾರೆ.
ಮೃತರ ತಂದೆ ಭದ್ರೇಗೌಡ ನೀಡಿದ ದೂರಿನ ಮೇರೆಗೆ ಆರೋಪಿ ಸುಶಾಂತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


