ಸದಾಶಿವನಗರದ ಸ್ಪಾ ಮೇಲೆ ಸಿಸಿಬಿ ಪೊಲೀಸರ ದಾಳಿ: 5 ಯುವತಿಯರ ರಕ್ಷಣೆ, 2 ಆರೋಪಿಗಳ ಬಂಧನ
ಸದಾಶಿವನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಸಮ್ಮರ್ ಹಿಲ್ಸ್ ಸ್ಪಾ ಹಾಗೂ ಮಸಾಜ್ ಪಾರ್ಲರ್ ಮೇಲೆ ಸಿಸಿಬಿ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದು, ಐವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.

ಬೆಂಗಳೂರು: ಸದಾಶಿವನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಸಮ್ಮರ್ ಹಿಲ್ಸ್ ಸ್ಪಾ ಹಾಗೂ ಮಸಾಜ್ ಪಾರ್ಲರ್ ಮೇಲೆ ಸಿಸಿಬಿ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದು, ಐವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ಕೊರೋನಾ ಲಾಕ್ಡೌನ್ ನಿಂದ ಸ್ಪಾಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿಲ್ಲ. ಆದರೂ ಸ್ಪಾಗಳ ಹೆಸರಿನಲ್ಲಿ ವೇಶ್ಯಾವಾಟಿಕೆಯನ್ನು ನಡೆಸಲಾಗುತ್ತಿತ್ತು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಐವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಸಿಲಿಕಾನ್ ಸಿಟಿಯ ಹಲವೆಡೆ ಮಸಾಜ್ ಸೆಂಟರ್ ಹೆಸರಿನಲ್ಲಿ ಅಕ್ರಮ ದಂಧೆಗಳನ್ನ ನಡೆಸುತ್ತಿರುವ ಆರೋಪಗಳು ಪದೇ ಪದೇ ಕೇಳಿಬರುತ್ತಲೆ ಇರುತ್ತದೆ. ದೂರು ಬಂದಾಗ ಸಿಸಿಬಿ ದಾಳಿ ನಡೆಸುತ್ತೆ. ನಂತರ ಮತ್ತೆ ಇಂತಹ ಚಟುವಟಿಕೆಗಳನ್ನ ಅದೇ ಸ್ಪಾ ನಡೆಸುತ್ತೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಸಾಮಾಜಿಕ ಕಾರ್ಯಕರ್ತರು ಮನವಿ ಮಾಡುತ್ತಲೆ ಇದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


