ರಾಜ್ಯ

ಡ್ರಗ್ಸ್ ದಂಧೆ: ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ಪ್ರಸ್ತಾಪ ಸಾಧ್ಯತೆ

ಈ ತಿಂಗಳ 21 ರಿಂದ ವಿಧಾನಸಭಾ ಅಧಿವೇಶನ ಆರಂಭವಾಗಲಿದ್ದು, ಡ್ರಗ್ಸ್ ದಂಧೆ ಸೇರಿದಂತೆ ಹಲವು ವಿಚಾರಗಳ ಕುರಿತು ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಡ್ರಗ್ಸ್ ದಂಧೆ: ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ಪ್ರಸ್ತಾಪ ಸಾಧ್ಯತೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಈ ತಿಂಗಳ 21 ರಿಂದ ವಿಧಾನಸಭಾ ಅಧಿವೇಶನ ಆರಂಭವಾಗಲಿದ್ದು, ಡ್ರಗ್ಸ್ ದಂಧೆ ಸೇರಿದಂತೆ ಹಲವು ವಿಚಾರಗಳ ಕುರಿತು ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಕಾಂಗ್ರೆಸ್ ಘಟಕದ ಕಾರ್ಯಕಾರಿ ಅಧ್ಯಕ್ಷ ಹಾಗೂ ಶಾಸಕ ಈಶ್ವರ್ ಖಂಡ್ರೆಯವರು, ಡ್ರಗ್ಸ್ ದಂಧೆ ವಿಚಾರವನ್ನು ಅಧಿವೇಶನದಲ್ಲಿ ಪ್ರಸ್ತಾಪ ಮಾಡಲಾಗುತ್ತದೆ. ಈ ದಂಧೆಯಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿಗಳಾದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಇದಕ್ಕೆ ಅಂತ್ಯ ಹಾಡಬೇಕಿದೆ ಎಂದು ಹೇಳಿದ್ದಾರೆ. 

ಬಿಜೆಪಿ ನಾಯಕ ಹಾಗೂ ಮಾಜಿ ಉಪ ಸ್ಪೀಕರ್ ಎನ್.ಯೋಗಿಶ್ ಭಟ್ ಅವರು ಮಾತನಾಡಿ, ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆ ಕುರಿತು 2012ರಿಂದಲೂ ವರದಿ ಸಿದ್ಧಪಡಿಸಲಾಗಿದೆ. ಡ್ರಗ್ಸ್ ದಂಧೆಯನ್ನು ಮಟ್ಟ ಹಾಕಲು ರಾಜ್ಯದ ಪ್ರತೀ ಹಂತದಲ್ಲೂ ವ್ಯವಸ್ಥೆಯನ್ನು ಬಲಪಡಿಸಬೇಕಿದೆ. ಕಾಲೇಜು ವಿದ್ಯಾರ್ಥಿಗಳು ಹಾಗೂ ಪೋಷಕರು ನೀಡಿದ ದೂರುಗಳ ಆಧಾರದ ಮೇಲೆ ವರದಿಗಳನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.