ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಗಣನೀಯ ಸುಧಾರಣೆ:ವಾಸ್ತವಾಂಶ ಅರಿಯದೆ ಹೇಳಿಕೆ ಶೋಭೆ ತರಲ್ಲ- ಡಾ. ಕೆ. ಸುಧಾಕರ್
ರಾಜಧಾನಿ ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಗಣನೀಯ ಸುಧಾರಣೆ ಕಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಗಣನೀಯ ಸುಧಾರಣೆ ಕಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಜುಲೈ ತಿಂಗಳಿನಲ್ಲಿ ಶೇ. 1.85 ರಷ್ಟಿದ್ದ ಮರಣ ಪ್ರಮಾಣ ಶೇ. 1.50ಕ್ಕೆ ಇಳಿಕೆಯಾಗಿದೆ. ಜುಲೈ ತಿಂಗಳಲ್ಲಿ ಶೇ. 24 ಇದ್ದ ಪಾಸಿಟಿವ್ ದರ ಶೇ. 14.74ಕ್ಕೆ ಇಳಿಕೆಯಾಗಿದೆ. ಜುಲೈ ಆರಂಭದಲ್ಲಿ ಪ್ರತೀ ದಿನ ನಡೆಸುತ್ತಿದ್ದ 4,000 ಟೆಸ್ಟಿಂಗ್ ಸಂಖ್ಯೆ ಈಗ 25,000ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಎಚ್.ಕೆ. ಪಾಟೀಲ್ ಅವರೆ, ತಾವು ಹಿರಿಯರಿದ್ದೀರಿ. ವಾಸ್ತವಾಂಶ ಅರಿಯದೆ ಜನರ ದಿಕ್ಕು ತಪ್ಪಿಸುವ ಹೇಳಿಕೆ ಕೊಡುವುದು ನಿಮಗೆ ಶೋಭೆ ತರುವುದಿಲ್ಲ. ಕರ್ನಾಟಕದ ಕೋವಿಡ್ ಮರಣ ಪ್ರಮಾಣ 1.64% ಮತ್ತು ಬೆಂಗಳೂರಿನ ಕೋವಿಡ್ ಮರಣ ಪ್ರಮಾಣ 1.50%ರಷ್ಟಿದ್ದು, ರಾಷ್ಟ್ರೀಯ ಮರಣ ಪ್ರಮಾಣ ಶೇ. 1.76ಕ್ಕಿಂತ ಕಡಿಮೆಯಿದೆ (1/2) ಎಂದು ಡಾ. ಕೆ. ಸುಧಾಕರ್ ತಿರುಗೇಟು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


