ರಾಜ್ಯ

ಸಿಎಂ ಅಧ್ಯಕ್ಷತೆಯಲ್ಲಿಂದು ಸಂಪುಟ ಸಭೆ: ಮಹತ್ವದ ಎರಡು ತೀರ್ಮಾನಗಳ ಸಾಧ್ಯತೆ 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕ ಕೃಷಿ ಬೆಲೆ ಆಯೋಗವನ್ನು 2020-23ರವರೆಗೆ ಮುಂದುವರಿಕೆ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ-2020ಕ್ಕೆ ಅನುಮೋದನೆ ಪಡೆಯುವುದು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಸಿಎಂ ಅಧ್ಯಕ್ಷತೆಯಲ್ಲಿಂದು ಸಂಪುಟ ಸಭೆ: ಮಹತ್ವದ ಎರಡು ತೀರ್ಮಾನಗಳ ಸಾಧ್ಯತೆ 
ಸಂಗ್ರಹ ಚಿತ್ರ
Published On :

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕ ಕೃಷಿ ಬೆಲೆ ಆಯೋಗವನ್ನು 2020-23ರವರೆಗೆ ಮುಂದುವರಿಕೆ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ-2020ಕ್ಕೆ ಅನುಮೋದನೆ ಪಡೆಯುವುದು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.     

ಗುರುವಾರ ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಈ ಸಭೆಯಲ್ಲಿ ಖಾಸಗಿ ವೈದ್ಯಕಿಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ ಮಂಡನೆಗೆ ನಿರ್ಧರಿಸಲಾಗಿದೆ. ಕೊರೋನಾ ಸಂದರ್ಭದಲ್ಲಿ ಕೆಪಿಎಂಇ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವುದು ಕುತೂಹಲ ಕೆರಳಿಸಿದೆ. ಯಾವ ಅಂಶಗಳಿಗೆ ತಿದ್ದುಪಡಿ ಎಂಬುದು ತಿಳಿದುಬಂದಿಲ್ಲ. 

ಉಳಿದಂತೆತ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನ ಸಂಬಂಧ ಕ್ಲಸ್ಟರ್ ವಾರು ವಿಮಾ ಸಂಸ್ಥೆಗಳನ್ನು ನಿಗದಿಪಡಿಸುವುದು, ಕರ್ನಾಟಕ ಮುನ್ಸಿಪಲ್ ಕಾರ್ಪೊರೇ|ನ್ (2ನೇ ತಿದ್ದುಪಡಿ ವಿಧೇಯಕ)-2020, ಕರ್ನಾಟಕ ಸರಕು-ಸೇವೆಗಳ ತಿದ್ದುಪಡಿ ವಿಧೇಯಕ ಚರ್ಚೆಗೆ ಬರಲಿದೆ ಎನ್ನಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.