ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ
ಪುಲಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಆಗಸ್ಟ್ 11ರಂದು ನಡೆದಿದ್ದ ಗಲಭೆಯ ಕುರಿತು ರಾಜ್ಯ ಸರ್ಕಾರ, ಕೇಂದ್ರ ಗೃಹ ಇಲಾಖೆಗೆ ವರದಿ ಸಲ್ಲಿಸಿದೆ.

ಬೆಂಗಳೂರು: ಪುಲಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಆಗಸ್ಟ್ 11ರಂದು ನಡೆದಿದ್ದ ಗಲಭೆಯ ಕುರಿತು ರಾಜ್ಯ ಸರ್ಕಾರ, ಕೇಂದ್ರ ಗೃಹ ಇಲಾಖೆಗೆ ವರದಿ ಸಲ್ಲಿಸಿದೆ.
ನವೀನ್ ಎನ್ನುವ ವ್ಯಕ್ತಿ ಮುಹಮ್ಮದ್ ಪೈಗಂಬರ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ ನೂರಾರು ಜನರು ರಾತ್ರೋ ರಾತ್ರಿ ವಾಹನಗಳು ಹಾಗೂ ಶಾಸಕರ ಮನೆಗೂ ಬೆಂಕಿ ಹಚ್ಚಿ ಗಲಭೆ ನಡೆಸಿದ್ದರು.
ಈ ಗಲಭೆಯಲ್ಲಿ ಎಸ್‍ಡಿಪಿಐ ಪಾತ್ರ ಇದೆ ಎನ್ನುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದು, ಈ ಸಂಘಟನೆಯನ್ನು ನಿಷೇಧ ಮಾಡಬೇಕೆಂಬ ಒತ್ತಡವೂ ಬಂದಿತ್ತು. ಅಲ್ಲದೇ ಗಲಭೆಯಲ್ಲಿ ಕಾಂಗ್ರೆಸ್ ನಾಯಕರ ಪಾತ್ರ ಇದೆ ಎನ್ನುವ ಅನುಮಾನವಿದ್ದು, ಈ ಕುರಿತು ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆ ನಡೆಸುತ್ತಿದ್ದು, ಇದುವರೆಗೂ ಗಲಭೆಯಲ್ಲಿ 300 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


